ಶಿವಮೊಗ್ಗ

ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅನುದಾನ

Published On :

ಸಾಗರ: ರಾಜ್ಯದ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಇನ್ನಿಲ್ಲದಷ್ಟು ಅನುದಾನ, ಸೌಲಭ್ಯ ನೀಡಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ಶನಿವಾರ ಅಭಿವ್ಯಕ್ತಿ ಕಾರ್ಯಕ್ರಮ ಉದ್ಘಾಟಿಸಿ, ಈ ಬಾರಿಯ ಬಜೆಟ್ಟಿನಲ್ಲಿಯೂ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ ಎಂದರು.
ಹಿಂದೆ ಆರ್ಥಿಕವಾಗಿ ಹಿಂದುಳಿದವರಿಗೆ ಉನ್ನತ ಶಿಕ್ಷಣ ಪಡೆಯಲು ತೀರ ಕಷ್ಟವಾಗುತ್ತಿತ್ತು. ಇದನ್ನು ಮನಗಂಡ ಸರ್ಕಾರ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡಿದೆ. ಮೆರಿಟ್ ಆಧಾರದ ಮೇಲೆ ಬಡವರ್ಗದ ವಿದ್ಯಾರ್ಥಿಗಳು ಸಹ ವೈದ್ಯಕೀಯ, ಇಂಜಿನಿಯರ್ ಇನ್ನಿತರ ಪದವಿ ಪಡೆಯುವ ವಾತಾವರಣ ಸರ್ಕಾರ ಕಲ್ಪಿಸಿದೆ. ವಿದ್ಯಾರ್ಥಿಗಳು ಸರ್ಕಾರದ ಯೋಜನೆಯ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಸಿಕೊಳ್ಳಬೇಕು ಎಂದು ಹೇಳಿದರು.
ಸಹಕಾರ ಮನೋಭಾವ ಅಗತ್ಯ: ರ್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಪಶ್ಚಿಮಘಟ್ಟ ಅಭಿವೃದ್ಧಿ ಕಾರ್ಯಪಡೆ ಅಧ್ಯಕ್ಷ ಅನಂತ ಹೆಗಡೆ ಅಶಿಸರ, ಶಿಕ್ಷಣವು ಮಾನವೀಯತೆ ಹಾಗೂ ಸಹಕಾರ ಮನೋಭಾವ, ಸಮಾನತೆಯ ಗುಣಧರ್ಮವನ್ನು ಸೃಷ್ಟಿಸಬೇಕು. ಇತ್ತೀಚಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆದವರು ಸಮಾಜದ ಕೆಳವರ್ಗದವರನ್ನು, ರೈತರನ್ನು, ಗ್ರಾಮಗಳನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಉತ್ತಮ ಸಂಬಂಧಗಳು ಮರೆಯಾಗುತ್ತಿದ್ದು, ಮಾನವೀಯ ಮೌಲ್ಯ ಮರೆಯಾಗುತ್ತಿರುವುದು ವಿಷಾದನೀಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.