ಅರ್ಜಿ ಆಹ್ವಾನ

Updated on: 

ಶಿವಮೊಗ್ಗ: ಜಿಲ್ಲೆಯಲ್ಲಿ ನಡೆಯುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪರೀಕ್ಷೆ ಮೂಲಕ 6ನೇ ತರಗತಿಗೆ ದಾಖಲಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಸಾಮಾನ್ಯ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳು 25ರೊಳಗಾಗಿ ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅಥವಾ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆಯ ತನಿಖಾ ಸಹಾಯಕರು, ಅಥವಾ ಆಯಾ ವಸತಿ ಶಾಲೆಗಳಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿ, ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕಚೇರಿ ಅಥವಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಲ್ಲಿ ಸಲ್ಲಿಸಬೇಕು ಎಂದು  ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ವಿವರಗಳಿಗಾಗಿ -08182-249241.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com