ಭೂ ಸ್ವಾಧೀನ ಕೈಬಿಡುವಂತೆ ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ: ಆಯನೂರು ಗ್ರಾಮದಲ್ಲಿ ಬಗರ್ಹುಕುಂ ಜಮೀನಿನ ಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ಆಗ್ರಹಿಸಿ ಶುಕ್ರವಾರ ಬಿಎಸ್ಆರ್ ಕಾಂಗ್ರೆಸ್ ಪಾರ್ಟಿ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಭಾಗದ ಸರ್ವೆ ನಂಬರ್ 123, 129ರಲ್ಲಿ ಬಸ್ ನಿಲ್ದಾಣ, ವಿಜ್ಞಾನ ಕೇಂದ್ರ ಕಟ್ಟಡ, ಶಿಕ್ಷಣ ಕೇಂದ್ರ, ತಾರಾಲಯ ಹಾಗೂ ಉದ್ಯಾನವನ ನಿರ್ಮಾಣ ಮಾಡುವ ಉದ್ದೇಶದಿಂದ ಇಲ್ಲಿನ ಸಾಗುವಳಿ ಮಾಡುತ್ತಿರುವ ಸುಮಾರು 350 ಎಕರೆ ಬಗರ್ಹುಕುಂ ಜಮೀನು ಸ್ವಾದೀನಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಇದರಿಂದ ಹತ್ತಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರು ಬೀದಿಪಾಲಾಗಲಿದ್ದಾರೆ. ಕೂಡಲೇ ಜಿಲ್ಲಾಡಳಿತ ರೈತರನ್ನು ಒಕ್ಕಲೆಬ್ಬಿಸುವ ಪ್ರಕ್ರಿಯೆ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಕೆ.ಪಿ. ಶ್ರೀನಿವಾಸ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ರುದ್ರೇಶ್, ರಾಜ್ಯ ಯುವ ಘಟಕ ಸಂಘಟನಾ ಕಾರ್ಯದರ್ಶಿ ಜಾವಳ್ಳಿಚಂದ್ರ, ಸ್ಥಳೀಯ ಗ್ರಾಮಸ್ಥರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

