ಮೂಡಿಗೆರೆ ತಾಪಂ ಸರ್ವ ಸದಸ್ಯರ ಸಭೆ
ಮೂಡಿಗೆರೆ: ತಾಪಂ ಅಧ್ಯಕ್ಷ ಎಂ.ಎ. ಶೇಷಗಿರಿ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯರ ಸಭೆ ತಾಪಂ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕುಡಿಯುವ ನೀರಿನ ಯೋಜನೆ ಮತ್ತು ಸರ್ಕಾರದಿಂದ ಬಂದ ಮನೆಗಳಿಗೆ ಮರಳು ದೊರಕಿಸಿಕೊಡುವ ಬಗ್ಗೆ ಚರ್ಚೆ ನಡೆಯಿತು. ಕುಡಿಯುವ ನೀರಿನ ಸಮಸ್ಯೆಗೆ ಜಿಪಂ ಮತ್ತು ಮೆಸ್ಕಾಂ ಇಲಾಖೆ ಕಾರಣ ಎಂದು ಎರಡೂ ಇಲಾಖೆ ಅಧಿಕಾರಿಗಳಿಗೆ ತಾಪಂ ಸದಸ್ಯರು ತರಾಟೆ ತೆಗೆದುಕೊಂಡರು.
ಮೆಸ್ಕಾಂ ಇಲಾಖೆ ಅಧಿಕಾರಿ ಮಾತನಾಡಿ, ಕುಡಿಯುವ ನೀರಿನ ಯೋಜನೆಗೆ ವಿದ್ಯುತ್ ಪೂರೈಕೆ ಹಾಗೂ ಇತರೆ ಕಾಮಗಾರಿಗಳ ಪ್ರಗತಿ ಕುರಿತು ವಿವರ ನೀಡಿ, ಕೆಲ ಕಾಮಗಾರಿಗಳು ಸಂಪೂರ್ಣ ಮುಗಿಯದಿದ್ದರೂ ಪೂರ್ಣಗೊಂಡಿವೆ ಎಂದರು. ತಾಪಂ ಮಾಜಿ ಅಧ್ಯಕ್ಷಹಿತ್ತಲಮಕ್ಕಿ ರಾಜೇಂದ್ರ, ತಾಪಂ ಮಾಜಿ ಅಧ್ಯಕ್ಷ ರಂಜನ್ ಅಜೀತ್ ಕುಮಾರ್ ಮಾತನಾಡಿದರು.
ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಸುಮಾ ಸುರೇಶ್, ಸ್ಥಾಯಿ ಸಮಿತಿ ಅಧ್ಯಕ್ಷೆ ನೇಪಾ ಆದಿತ್ಯ, ಸದಸ್ಯೆರಾದ ಹೋವಮ್ಮ, ಅಜುಲಾ ಅಯೂಬ್, ಸುಧಾ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚನ್ನಬಸಪ್ಪ ಮೇಕಾಲೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

