ರಾಜಕೀಯವಾಗಿ ಮುಖ್ಯವಾಹಿನಿಗೆ ಬನ್ನಿ
ಸಾಗರ: ಬಹುಸಂಖ್ಯಾತರಾಗಿರುವ ಬ್ರಾಹ್ಮಣ ಜನಾಂಗವು ರಾಜಕೀಯವಾಗಿಯೂ ಮುಖ್ಯವಾಹಿನಿಗೆ ಬರಬೇಕೆಂದರೆ ಬರುವ ವಿಧಾನಸಭೆ ಚುನಾವಣೆಯಲ್ಲಿ ಜನಾಂಗದ ಹೆಚ್ಚು ಅಭ್ಯರ್ಥಿಗಳು ಜಯಗಳಿಸುವಂತೆ ನೋಡಿಕೊಳ್ಳಬೇಕಾದ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯಾಧ್ಯಕ್ಷ ಡಾ. ಬಿ.ಎನ್.ವಿ. ಸುಬ್ರಹ್ಮಣ್ಯ ಹೇಳಿದರು.
ತಾಲೂಕು ಬ್ರಾಹ್ಮಣ ಮಹಾಸಭಾ ಹಮ್ಮಿಕೊಂಡಿದ್ದ ಸಂವಾದ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. .
ಗಣಪತಿ ಬ್ಯಾಂಕಿನ ಅಧ್ಯಕ್ಷೆ ಶೋಭಾ ಲಂಬೋದರ, ಸ್ನೇಹಸಾಗರ ಮಹಿಳಾ ಮಂಡಳಿಯ ಚೂಡಾಮಣಿ ರಾಮಚಂದ್ರ, ಪತ್ರಕರ್ತರಾದ ದೀಪಕ್ ಸಾಗರ್, ಗಣಪತಿ ಶಿರಳಗಿ ಹಾಗೂ ಸರಹದ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಐ.ವಿ. ಹೆಗಡೆ, ಕೆ.ವಿ. ಪ್ರವೀಣಕುಮಾರ್ ಇವರುಗಳನ್ನು ಸನ್ಮಾನಿಸಲಾಯಿತು.
ಚಿಪ್ಪಳಿ ಗೋಪಾಲಕೃಷ್ಣ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಮಹಾಸಭಾದ ಜಂಟಿ ಕಾರ್ಯದರ್ಶಿ ದಿನೇಶಕುಮಾರ್ ಜೋಷಿ ವೈವಾಹಿಕ ಸಮಸ್ಯೆಗಳು, ಪರಿಹಾರ- ಪ್ರಯತ್ನ ವಿಷಯ ಕುರಿತು, ಸಂಘಟನಾ ಕಾರ್ಯದರ್ಶಿ ಮ.ಸ.ನಂಜುಂಡಸ್ವಾಮಿ ತಟ್ಟೆ ಕಾಣಿಕೆ ವಿಷಯ ಕುರಿತು ಉಪನ್ಯಾಸ ನೀಡಿದರು.
ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗಡೆ, ಡಿ.ಎಸ್. ಹೊನ್ನಪ್ಪ, ಬಿ.ಎನ್. ಸುರೇಶ್, ಕೆ. ದಿವಾಕರ್, ಛಾಯಾಪತಿ, ಅನಂತ್, ಕಟ್ಟಿನಕೆರೆ ಸೀತಾರಾಮಯ್ಯ, ಶರಾವತಿ ಸಿ. ರಾವ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

