ತೀರ್ಥಹಳ್ಳಿ: 14 ರಂದು ಕೆಜೆಪಿ ಅಧಿಕೃತ ಕಚೇರಿಯ ಉದ್ಘಾಟನೆ ಮತ್ತು ಕಾರ್ಯಕರ್ತರ ಸಮಾವೇಶ ಏರ್ಪಡಿಸಲಾಗಿದೆ ಎಂದು ಪಕ್ಷದ ಉಪಾಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಅವರು, ಕೆಜೆಪಿ ಜಿಲ್ಲಾಧ್ಯಕ್ಷ ಜ್ಯೋತಿ ಪ್ರಕಾಶ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಪಕ್ಷದ ಕಚೇರಿ ಉದ್ಘಾಟಿನೆ ನಂತರ ಯೂನಿಟಿ ಹಾಲ್ನಲ್ಲಿ ಕಾರ್ಯಕರ್ತರ ಸಭೆ ನೆಡೆಸಲಾಗುತ್ತದೆ ಹಾಗೂ 27ರಂದು ಯುವ ಕೆಜೆಪಿ ಕಾರ್ಯಕರ್ತರ ಸಮಾವೇಶ ತೀರ್ಥಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಪಕ್ಷದ ಸಂಘಟನೆಯ ದೃಷ್ಟಿಯಿಂದ ಚರ್ಚೆ ನೆಡೆಸಲಾಗುವುದು. ಹೋಬಳಿ ಮಟ್ಟದ ಘಟಕಗಳಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗುತ್ತದೆ. ಪಕ್ಷ ಎಲ್ಲ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು. ಉತ್ತರ ಕರ್ನಾಟಕದ ಬೀದರ್ ಜಿಲ್ಲೆಯ ಉಸ್ತುವಾರಿ ತಮ್ಮ ಹೆಗಲಿಗೆ ಬಂದಿದ್ದು, ಈ ಭಾಗದಲ್ಲಿ ಪಕ್ಷ ಉತ್ತಮ ಸಾಧನೆ ತೋರಲಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.