ರೈತರ ಕಷ್ಟಕ್ಕೆ ಸ್ಪಂದಿಸಿದರೆ ಬದುಕು ಹಸನು
ಭದ್ರಾವತಿ: ರೈತರ ಸಂಕಷ್ಟಗಳಿಗೆ ಸ್ಪಂದಿಸಿದಾಗ ರೈತನ ಬದುಕು ಹಸನಾಗುತ್ತದೆಂದು ಶಾಸಕ ಬಿ.ಕೆ. ಸಂಗಮೇಶ್ವರ ಹೇಳಿದರು.
ಸೋಮವಾರ ಕೃಷಿ ಇಲಾಖೆ, ಕೃಷಿ ಸಂಬಂಧಿತ ಇಲಾಖೆಗಳು ಹಾಗೂ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯಗಳ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಬಸವೇಶ್ವರ ಸಭಾಭವನದಲ್ಲಿ ಏರ್ಪಡಿಸಿದ್ದ ಕೃಷಿ ಮಾಹಿತಿ ಆಂದೋಲನ ಉದ್ಘಾಟಿಸಿ ಮಾತನಾಡಿ, ರೈತ ದೇಶದ ಬೆನ್ನುಲುಬಾದರೂ ಅನ್ನದಾತನ ಬಾಳು ಸಂಕಷ್ಟದಲ್ಲಿದೆ ಎಂದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಶಿವಮೂರ್ತಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ರೈತರಿಗೆ ಎಲ್ಲಾ ಮಾಹಿತಿಗಳನ್ನೂ ಒಂದೇ ಜಾಗದಲ್ಲಿ ನೀಡುವ ಹಾಗೂ ಚರ್ಚೆ ಮಾಡಿ ಸಲಹೆ ನೀಡುವ ಸಲುವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಜಿಪಂ ಕೈಗಾರಿಕಾ ಹಾಗೂ ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷೆ ವೈ.ಡಿ. ಉಷಾ ಕೃಷಿ ಮಾಹಿತಿ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿ, ಕೈಗಾರಿಕಾ ಕ್ರಾಂತಿಯಿಂದಾಗಿ ಕೃಷಿ ಭೂಮಿ ಕಡಮೆಯಾಗುತ್ತಿವೆ. ಜನಸಂಖ್ಯಾ ಸ್ಫೋಟದಿಂದಾಗಿ ಆಹಾರಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರೈತರು ಹೆಚ್ಚು ಇಳುವರಿ ನೀಡುವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದರು.
ಜಿಪಂ ಸದಸ್ಯೆ ಹೇಮಾಪಾವನಿ, ಜಿಪಂ ಸದಸ್ಯ ಎಚ್.ಎಲ್. ಷಡಾಕ್ಷರಿ, ಟಿ.ಎಸ್. ಮಂಜುನಾಥ್, ತಾಪಂ ಅಧ್ಯಕ್ಷೆ ಜಮರುದ್ ಬಾನು, ಶ್ರೀನಿವಾಸ್, ಆರ್. ಹಾಲಪ್ಪ, ಅನ್ನಪೂರ್ಣ, ಭುವನೇಶ್ವರಿ, ಸಾಕಮ್ಮ, ದೇವೇಂದ್ರನಾಯ್ಕ ಇದ್ದರು.
ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳು, ಸಾವಯವ ಕೃಷಿ ಉತ್ಪನ್ನಗಳು, ತೋಟಗಾರಿಕೆ, ಪಶುಪಾಲನೆ, ರೇಷ್ಮೆ, ಮೀನುಗಾರಿಕೆ ಇಲಾಖೆಯ ಮಳಿಗೆಗಳು, ಕೃಷಿ ಸಲಕರಣೆಗಳ ವಸ್ತುಪ್ರದರ್ಶನ ಮಾರಾಟ ಮಳಿಗೆಗಳು ರೈತರ ಗಮನ ಸೆಳೆದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

