'ವ್ಯಾಲೆಂಟೈನ್ ಡೇ ನಿಷೇಧಿಸಿ'
ಸಾಗರ: ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡುತ್ತಿರುವ ವ್ಯಾಲೆಂಟೈನ್ ಡೇ ನಿಷೇಧಿಸಬೇಕು ಎಂದು ಒತ್ತಾಯಿಸಿ ಸೋಮವಾರ ಹಿಂದೂ ಜನಜಾಗೃತಿ ಸಮಿತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
14ರಂದು ಯುವಕ ಯುವತಿಯರು ಪ್ರೇಮಿಗಳ ದಿನಾಚರಣೆಯನ್ನು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ. ಅನೇಕ ಸಂದರ್ಭದಲ್ಲಿ ಈ ದಿನಾಚರಣೆ ಹಿಂದೂ ಯುವತಿಯರ ಮತಾಂತರಕ್ಕೂ ಪ್ರಚೋದಿಸುತ್ತಿದೆ. ಸಾಂಸ್ಕೃತಿಕ ಮತಾಂತರಕ್ಕೆ ಪ್ರೋತ್ಸಾಹ ನೀಡುವ ಇಂತಹ ಆಚರಣೆಗಳು ಭಾರತೀಯ ಸಂಸ್ಕೃತಿಗೆ ವಿರುದ್ಧವಾಗಿದ್ದು ಹರೆಯದ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಪ್ರೇಮಿಗಳ ದಿನಾಚರಣೆ ನೆಪದಲ್ಲಿ ಹೆಣ್ಣುಮಕ್ಕಳನ್ನು ಪೀಡಿಸುವುದು, ಮಾದಕ ವ್ಯಸನಕ್ಕೆ ಪ್ರೇರೇಪಿಸುವುದು, ಪಬ್ ಬಾರುಗಳಲ್ಲಿ ಮದ್ಯಪಾನ ಮಾಡಿ ಲಿಂಗಭೇದವಿಲ್ಲದೆ ಕುಣಿಯುವುದು ಇತರ ಕೆಟ್ಟ ಆಚರಣೆ ನಡೆಯುತ್ತಿದೆ. ಹಿಂದೂ ಸಮಾಜದ ನೈತಿಕ ಅಧಃಪತನಕ್ಕೆ ಕಾರಣವಾಗಿರುವ ಇಂತಹ ಆಚರಣೆ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕಾನೂನುಬಾಹಿರ ಕಾರ್ಯಕ್ರಮ ಆಯೋಜಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಮಿತಿಯ ಮುಕುಂದ, ಸುದರ್ಶನ, ಸೀತಾರಾಮ, ರಾಜಣ್ಣ, ವಕೀಲ ಕೆ.ವಿ.ಪ್ರವೀಣಕುಮಾರ್, ಉಲ್ಲಾಸ್, ರವೀಶ್, ಕುಂಟಗೋಡು ಸೀತಾರಾಮ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

