ಶಿವಮೊಗ್ಗ: ವೆಂಕಟೇಶನಗರದ ವೆಂಕಟೇಶ್ವರ ದೇವಾಲಯದಲ್ಲಿ ಫೆ.17ರಂದು ಹಯಗ್ರೀವ ಹೋಮ ಏರ್ಪಡಿಸಲಾಗಿದೆ. ಬೆಳಿಗ್ಗೆ 10.30ಕ್ಕೆ ಪೂಜಾರಂಭ, ಮಧ್ಯಾಹ್ನ 1.30ಕ್ಕೆ ಪೂರ್ಣಾಹುತಿ, ತೀರ್ಥಪ್ರಸಾದ ವಿನಿಯೋಗ ಇರುತ್ತದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಉಚಿತ ನೇತ್ರ ಚಿಕಿತ್ಸೆ
ಶಿವಮೊಗ್ಗ: ಕರ್ನಾಟಕ ರಕ್ಷಣಾ ವೇದಿಕೆ, ಸ್ಪೂರ್ತಿ ಟ್ರಸ್ಟ್ ಹಾಗೂ ಕ್ರಾಂತಿ ದೀವಿಗೆ ಟ್ರಸ್ಟ್ ಆಶ್ರಯದಲ್ಲಿ ಫೆ.14, 15 ಮತ್ತು 16ರಂದು ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9ರಿಂದ ತಪಾಸಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.