ಶಿವಮೊಗ್ಗ

ಧರ್ಮಸ್ಥಳ ಯೋಜನೆಯಿಂದ ಶೈಕ್ಷಣಿಕ ಕ್ಷೇತ್ರಕ್ಕೂ ಸಹಾಯ

Published On :

ಜೋಗ್‌ಫಾಲ್ಸ್: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇವಲ ಗ್ರಾಮೀಣ ಭಾಗದ ಮಹಿಳೆಯರ ಉದ್ಧಾರವನ್ನೇ  ಉದ್ದೇಶವಾಗಿರಿಸಿಕೊಳ್ಳದೆ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೂ ಸಹಾಯ ಹಸ್ತ ನೀಡುತ್ತಿದೆ ಎಂದು ಯೋಜನೆಯ ಜಿಲ್ಲಾ ನಿರ್ದೇಶಕ ಸುಧೀರ್‌ಕುಮಾರ್ ಬಂಟ್ವಾಳ್ ತಿಳಿಸಿದರು. ಅವರು ಸಮೀಪದ ತಾಳುಗುಪ್ಪದಲ್ಲಿ ಹುಣಸೂರು, ಆಲಳ್ಳಿ, ಮರತ್ತೂರು, ತಾಳುಗುಪ್ಪ, ಇಡುವಾಣಿ ಶಾಲೆಗಳಿಗೆ  ಕಬ್ಬಿಣದ ಕಪಾಟುಗಳನ್ನು ವಿತರಿಸಿ ಮಾತನಾಡಿದರು. ಇತ್ತೀಚಿಗೆ ನಡೆದ ಕೃಷಿ ಉತ್ಸವ ಮತ್ತು ಹಲವು ಕಾರ್ಯಕ್ರಮಗಳಲ್ಲಿ ಉಳಿದ ಹೆಚ್ಚಿನ ಹಣವನ್ನು ಸದ್ಬಳಕೆ ಮಾಡಬೇಕೆಂಬ ಉದ್ದೇಶದಿಂದ ಶಾಲೆಗಳಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲಾಗುತ್ತಿದೆ. ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಯೋಜನೆಯ ಫಲ ದೊರೆಯಬೇಕೆಂಬುದೇ ಧರ್ಮಾಧಿಕಾರಿಗಳ ಆಶಯವಾಗಿದೆ. ಅದನ್ನು ಈಡೇರಿಸುವಲ್ಲಿ ಯೋಜನೆಯ ಎಲ್ಲಾ ಪದಾಧಿಕಾರಿಗಳೂ, ಸದಸ್ಯರೂ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗ್ರಾಪಂ ಸದಸ್ಯ ಮೋಹನ್ ಶೇಟ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಲವಾರು ಕುಟುಂಬಗಳು ಆರ್ಥಿಕ ಸ್ವಾವಲಂಬಿತನ ಸಾಧಿಸುತ್ತಿದೆ. ಉತ್ತಮ ಕಾರ್ಯಕ್ರಮಗಳಿಗೂ ಉದಾರ ದೇಣಿಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗುತ್ತಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.