ಮರಳು ಲಾರಿ ಮುಷ್ಕರ ಮುಂದುವರಿಕೆ
ಶಿವಮೊಗ್ಗ: ಮರಳು ಲೋಡಿಂಗ್ ಪಾಯಿಂಟ್ ಹೆಚ್ಚಳಕ್ಕೆ ಸಂಬಂಧಿಸಿದಂತೆ ಬುಧವಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆ ಯಾವುದೇ ಸ್ಪಷ್ಟ ತೀರ್ಮಾನ ಕೈಗೊಳ್ಳಲು ವಿಫಲವಾಯಿತು.
ಈ ಹಿನ್ನೆಲೆಯಲ್ಲಿ ಮರಳು ಸಾಗಣೆ ಲಾರಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದುವರಿಸಲು ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಣೆ ಲಾರಿ ಮಾಲೀಕರ ಸಂಘ ನಿರ್ಧರಿಸಿತು.
ಸರಿಸುಮಾರು ಒಂದು ಗಂಟೆಗೂ ಅಧಿಕ ಸಮಯ ನಡೆದ ಸಭೆಯಲ್ಲಿ ಹೊಸ ಲೋಡಿಂಗ್ ಪಾಯಿಂಟ್‌ಗಳಲ್ಲಿ ಮರಳು ತುಂಬುವುದಕ್ಕೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗಿಲ್ಲ. ಈ ಹಿನ್ನೆಲೆಯಲ್ಲಿ ಮುಷ್ಕರ ಮುಂದುವರಿಸಲು ಲಾರಿ ಮಾಲೀಕರು ತೀರ್ಮಾನಿಸಿದರು.
ಸಾಕಷ್ಟು ವಿಳಂಬವಾಗಲಿದೆ: ಮರಳು ತುಂಬಲು ಹೊಸ ಲೋಡಿಂಗ್ ಪಾಯಿಂಟ್‌ಗಳನ್ನು ಗುರುತಿಸಬೇಕು ಎಂಬುವುದು ತಮ್ಮ ಪ್ರಮುಖ ಬೇಡಿಕೆಯಾಗಿತ್ತು. ಈ ಕುರಿತಂತೆ ಸ್ಥಳೀಯ ಗ್ರಾಮ ಪಂಚಾಯಿತಿಗಳೊಂದಿಗೆ ಅಧಿಕಾರಿಗಳು ಚರ್ಚೆ ನಡೆಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಸುಮಾರು ಒಂದು ವಾರಗಳ ಸಮಯಾವಕಾಶ ಅಗತ್ಯವಿದೆ ಎಂದು ಡಿಸಿ ತಿಳಿಸಿದ್ದಾರೆ. ಇದರಿಂದ ಸಾಕಷ್ಟು ವಿಳಂಬವಾಗಲಿದೆ ಎಂದು ಮರಳು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಡಿ. ರಾಜಶೇಖರಪ್ಪ ಪ್ರತಿಕ್ರಿಯಿಸಿದರು.
ಗುಣಮಟ್ಟದ ಮರಳು ಸಿಗುತ್ತಿಲ್ಲ: ಸದ್ಯ ತೀರ್ಥಹಳ್ಳಿ ತಾಲೂಕಿನ ಮೂರು ಸ್ಥಳಗಳಲ್ಲಿ ಮಾತ್ರ ಮರಳು ತುಂಬಲು ಅವಕಾಶ ನೀಡಲಾಗಿತ್ತು, ಈಗ ಈ ಸ್ಥಳದಲ್ಲಿ ಮರಳು ಖಾಲಿಯಾಗುವ ಹಂತಕ್ಕೆ ಬಂದಿದೆ. ಗುಣಮಟ್ಟದ ಮರಳು ಸಿಗುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದೇ ತಾಲೂಕಿನ ಹಲವು ಸ್ಥಳಗಳಲ್ಲಿ ಮರಳು ಲಭ್ಯವಿದೆ. ಈ ಪ್ರದೇಶಗಳಲ್ಲಿ ಮರಳು ತುಂಬಲು ತಕ್ಷಣವೇ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಬೇಡಿಕೆ ಈಡೇರುವವರೆಗೂ ಮುಷ್ಕರ ನಿಲ್ಲಿಸುವುದಿಲ್ಲ, ಪ್ರತಿಭಟನೆ ಮುಂದುವರೆಸಲಾಗುವುದು ನಡೆಸಲಾಗುವುದು ಎಂದು ಹೇಳಿದರು.
ಪ್ರಮುಖರು ತೀವ್ರ ಆಕ್ಷೇಪ: ತರೀಕೆರೆ ತಾಲೂಕಿಗೆ ಮರಳು ಸಾಗಾಣೆಗೆ ಪ್ರತಿದಿನ 50 ಪರ್ಮಿಟ್ ನೀಡುವ ಜಿಲ್ಲಾಧಿಕಾರಿಯವರ ಕ್ರಮಕ್ಕೆ ಸಭೆಯಲ್ಲಿದ್ದ ಸಂಘದ ಪ್ರಮುಖರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಸಂಘದ ಪ್ರಮುಖರ ನಡುವೆ ಮಾತಿನ ಚಕಮಕಿ ಕೂಡ ನಡೆದು ಸಭೆಯಲ್ಲಿ ಕೆಲ ಸಮಯ ಗೊಂದಲ ವಾತಾವರಣ ಕೂಡ ನಿರ್ಮಾಣವಾಯಿತು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಸಂಥಿಲ್, ಉಪ ವಿಭಾಗಾಧಿಕಾರಿ ವೈಶಾಲಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

