ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ: ಇಎಸ್ಐ ಹಾಗೂ ಪಿಎಫ್ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಕೆಎಫ್ಸಿಸಿ ಗೋದಾಮಿನ ಹಮಾಲರ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆಗಳ ಕಾರ್ಮಿಕರ ಸಂಘದ ಸದಸ್ಯರು ಬುಧವಾರ ಜಿಲ್ಲಾಧಿಕಾರಿ ವಿಫುಲ್ ಬನ್ಸಾಲ್ ಅವರಿಗೆ ಮನವಿ ನೀಡಿದರು.
ಇಲ್ಲಿನ ಕೆಎಫ್ಸಿ ಹಾಗೂ ನಾಗರಿಕ ಆಹಾರ ಮತ್ತು ಪಡಿತರ ವಸ್ತುಗಳ ವಿಲೇವಾರಿ ಉಗ್ರಾಣಗಳಲ್ಲಿ ಹಲವಾರು ವರ್ಷಗಳಿಂದ ನೂರಾರು ಹಮಾಲಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಈ ಕಾರ್ಮಿಕರಿಗೆ ವೇತನ ಸೌಲಭ್ಯಗಳಾದ ಪಿಎಫ್, ಇಎಸ್ಐ ಪಿಂಚಣಿ ಹಾಗೂ ಗುರುತಿನ ಚೀಟಿ ವಿತರಣೆ ಮಾಡಿಲ್ಲ ಎಂದರು.
ಈ ಸಂಬಂಧ ಹಲವಾರು ಬಾರಿ ಇಲಾಖಾ ಅಧಿಕಾರಿಗಳಿಗೆ ಮನವಿ ಮಾಡಿದರು ಯಾವುದೇ ಕ್ರಮಕೈಗೊಂಡಿಲ್ಲ. ಬಡ ಮತ್ತು ಅವಿದ್ಯಾವಂತ ಕೂಲಿ ಕಾರ್ಮಿಕರನ್ನು ಕಡೆಗಣಿಸುತ್ತಿದ್ದಾರೆ. ಗೋದಾಮುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಸಾಕಷ್ಟು ಬಾರಿ ಅಪಘಾತಗಳು ಸಂಭವಿಸಿವೆ ಎಂದು ಆಪಾದಿಸಿದರು.
ಅಧ್ಯಕ್ಷ ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ, ಬೋರೆಗೌಡ, ರವಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

