ಶಿವಮೊಗ್ಗ

'ರಾಜ್ಯ ಸರ್ಕಾರದಿಂದ ರೈತರಿಗೆ ದ್ರೋಹ'

Published On :

ಶಿವಮೊಗ್ಗ: ಕೃಷಿಗೆ ಭದ್ರಾ ಜಲಾಶಯದ ನೀರು ಬಳಸುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರದ ಕ್ರಮ ವಿಷಾದನೀಯ ಎಂದು ಜೆಡಿಎಸ್ ರಾಜ್ಯ ಸಂಸದಿಯ ಮಂಡಳಿ ಸದಸ್ಯೆ, ಜಿ.ಪಂ. ಮಾಜಿ ಅಧ್ಯಕ್ಷೆ ಶಾರದಾ ಪೂರ್ಯಾ ನಾಯ್ಕ ಹೇಳಿದ್ದಾರೆ.
    ಇದು ರೈತರಿಗೆ ಮಾಡಿರುವ ದೊಡ್ಡ ಅನ್ಯಾಯವಾಗಿದೆ. ಭದ್ರಾ ಜಲಾಶಯದ ನೀರು ಹರಿಸುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಚ್ಚುಕಟ್ಟು ವ್ಯಾಪ್ತಿಯಲ್ಲಿನ ರೈತರು ಅಧಿಕಾರಿಗಳ ಸೂಚನೆಯನುಸಾರ ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ.
    ಇಂತಹ ಸಂದರ್ಭದಲ್ಲಿ ಏಕಾಏಕಿ ಕೃಷಿಗೆ ಜಲಾಶಯದಿಂದ ನೀರು ಹರಿಸುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರದ ಕ್ರಮ ಅವೈಜ್ಞಾನಿಕ, ರೈತ ವಿರೋಧಿಯಾಗಿದೆ. ಈ ನಿರ್ಧಾರದಿಂದ ರೈತರು ಸಾಕಷ್ಟು ಸಮಸ್ಯೆ, ಸಂಕಷ್ಟ ಎದುರಿಸುವಂತಾಗುತ್ತದೆ. ಈಗಾಗಲೇ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆಸಿರುವ ಬೆಳೆ ನಷ್ಟವಾಗಲಿದೆ.
   ಕೂಡಲೇ ಭದ್ರಾ ಅಚ್ಚುಕಟ್ಟು ಪ್ರಾದಿಕಾರದ ಅಧ್ಯಕ್ಷರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಹಿಂದೆ ನೀರು ಹರಿಸುವುದಕ್ಕೆ ಸಂಬಂಧಿಸಿದಂತೆ ಪ್ರಕಟಿಸಿದ ವೇಳಾಪಟ್ಟಿಯಂತೆ ನಡೆದುಕೊಳ್ಳಬೇಕು. ಕೃಷಿ ಉದ್ದೇಶಕ್ಕೆ ನೀರು ಹರಿಸಬೇಕು. ಪ್ರಸ್ತುತ ಕೃಷಿಗೆ ನೀರು ಬಳಕೆ ನಿಷೇಧಿಸುವ ಆದೇಶ ಹಿಂಪಡೆಯಬೇಕು ಎಂದು ಜೆಡಿಎಸ್ ರಾಜ್ಯ ಸಂಸದಿಯ ಮಂಡಳಿ ಸದಸ್ಯೆ, ಜಿ.ಪಂ. ಮಾಜಿ ಅಧ್ಯಕ್ಷೆ ಶಾರದಾ ಪೂರ್ಯಾ ನಾಯ್ಕ ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.