ಶಿವಮೊಗ್ಗ

ಕುಂಬಾರ ಸಮಾಜ ಸಂಘಟನೆಗೆ ನಾಯಕರ ಕೊರತೆ

Published On :

ಭದ್ರಾವತಿ: ಕುಂಬಾರ ಸಮಾಜದ ಸಂಘಟನೆಯಲ್ಲಿ ನಾಯಕರ ಕೊರತೆಯಿದ್ದು ಸಂಘಟನೆ ಬಲಪಡಿಸುವ ದಿಕ್ಕಿನಲ್ಲಿ ಸಮಾಜ ಬಾಂಧವರು ಚಿಂತನೆ ನಡೆಸಬೇಕೆಂದು ಕರ್ನಾಟಕ ರಾಜ್ಯ ಕುಂಬಾರ ಮಹಾಸಂಘದ ರಾಜ್ಯಾಧ್ಯಕ್ಷ ಶಿವಕುಮಾರ ಚೌಡಶೆಟ್ಟಿ ಕರೆ ನೀಡಿದರು.
ಭದ್ರಾವತಿ ತಾಲೂಕು ಕುಂಬಾರ ಕ್ಷೇಮಾಭಿವೃದ್ಧಿ ಸಂಘವು ವೀರಶೈವ ಸಭಾಭವನದಲ್ಲಿ ಏರ್ಪಡಿಸಿದ್ದ ಸಂಘದ ದ್ವಿತೀಯ ಪ್ರತಿಭಾ ಪುರಸ್ಕಾರ ಮತ್ತು ಮಹಿಳಾ ಗುಂಪುಗಳ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕುಂಬಾರರ ಸಂಘಟನೆಯನ್ನು ಬಲಪಡಿಸಲು ರಾಜ್ಯಸಂಘವು ಸಾಕಷ್ಟು ಶ್ರಮ ವಹಿಸುತ್ತಿದೆ ಎಂದರು.
1 ಕೋಟಿ ಮೀಸಲು: 2009-10ನೇ ಸಾಲಿನಲ್ಲಿ ಪ್ರಥಮ ರಾಜ್ಯ ಸಮ್ಮೇಳನವನ್ನು ಅದ ಯಶಸ್ವಿಯಾಗಿ ನಡೆಸಿದೆ. ಕುಂಬಾರ ಸಂಸ್ಕೃತಿ ಉಳಿಸಲು ಕುಂಬಾರ ಕಲಾ ನಿಗಮವನ್ನು ಸ್ಥಾಪಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸರ್ಕಾರವು ಈ ಬಾರಿಯ ಮುಂಗಡಪತ್ರದಲ್ಲಿ ಒಂದು ಕೋಟಿ ರು.ಗಳನ್ನು ಮೀಸಲಿರಿಸಿದೆ. ಅಲ್ಲದೆ ರಾಜ್ಯ ಸಂಘಕ್ಕೆ ಸಮುದಾಯ ಭವನ ನಿರ್ಮಾಣ ಮಾಡಲು ನಿವೇಶನ ಸಹ ಮಂಜೂರು ಮಾಡಿದೆ ಎಂದು ಅವರು ತಿಳಿಸಿದರು.
ಕುಂಬಾರ ಸಮಾಜದ ಏಳಿಗೆ ಇನ್ನೂ ಆಗಬೇಕಿದೆ. ಆದರೆ ಸಮಾಜದಲ್ಲಿ ರಾಜಕೀಯವಾಗಿ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಮುಂದುವರೆದ ನಾಯಕರ ಕೊರತೆ ಇರುವುದರಿಂದ ಈ ಸಮಾಜದ ಹೋರಾಟಕ್ಕೆ ಇತರ ಸಮಾಜದವರು ದನಿಯಾಗಿರಬೇಕೆಂದು ಮನವಿ ಮಾಡಿದರು.
ಶಾಸಕ ಬಿ.ಕೆ. ಸಂಗಮೇಶ್ವರ ಸಮಾರಂಭವನ್ನು ತಿಗರಿ ತಿರುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ಚೌಡಶೆಟ್ಟಿ, ಸಂಘಟನಾ ಕಾರ್ಯದರ್ಶಿ ಎಸ್.ಕೆ. ನಾಗರಾಜ್, ಹಾಸನ ಜಿಲ್ಲೆಯ ಕುಂಬಾರ ಸಂಘದ ಅಧ್ಯಕ್ಷ ರಂಗಸ್ವಾಮಿ, ಕುಂಬ ಕಲಾ ನಿಗಮದ ನಿರ್ದೇಶಕ ಹುಲುಗಪ್ಪ, ತಾಲೂಕು ಕುಂಬಾರ ಕ್ಷೇಮಾಭಿವೃದ್ಧಿ ಸಂಘದ ಮಹಿಳಾ ಕಾರ್ಯಾಧ್ಯಕ್ಷೆ ರಮಾಲಕ್ಷ್ಮಿ, ಬಿ.ಕೆ. ಜಗನ್ನಾಥ್, ನಗರಸಭಾ ಸದಸ್ಯೆ ವೈ. ರೇಣುಕ, ಸದಸ್ಯ ಕರಿಯಪ್ಪ ಮೊದಲಾದವರು ಉಪಸ್ಥಿತರಿದ್ದರು.
ತಾಲೂಕು ಕುಂಬಾರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ. ಚಂದ್ರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಿ.ಎನ್. ರಂಗಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.