ಯುವಕ ಆತ್ಮಹತ್ಯೆ

Updated on: 

ಶಿವಮೊಗ್ಗ: ಬಾಡಿಗೆ ಮನೆಯಲ್ಲಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಆತ್ಯಹತ್ಯೆ ಮಾಡಿಕೊಂಡ ಘಟನೆ ನಗರದ ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಜು(35) ಆತ್ಯಹತ್ಯೆ ಮಾಡಿಕೊಂಡ ಯುವಕ.
ಈತ ಮೆಡಿಕಲ್ ಕಂಪನಿಯೊಂದರ ಪ್ರತಿನಿಧಿಯಾಗಿದ್ದು, ದಾವಣಗೆರೆಯ ಮೂಲದವರೆಂದು ತಿಳಿದು ಬಂದಿದೆ. ಆದರೆ, ಆತ್ಮಹತ್ಯೆಗೆ ಕಾರಣ ಏನೇಂಬುದು ತಿಳಿದು ಬಂದಿಲ್ಲ. ಕಳೆದ ಎರಡು ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಣೆಯಿಂದ ಬರುತ್ತಿದ್ದ ದುರ್ವಾವಾಸನೆಯಿಂದ ಅನುಮಾನಗೊಂಡ ಮನೆ ಮಾಲೀಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ನಂತರ ಕಿಟಕಿಯಿಂದ ನೋಡಿದಾಗ ರಾಜು ಆತ್ಮಹತ್ಯೆಗೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಟ್ರ್ಯಾಕ್ಟರ್ ಪಲ್ಟಿ: ಸಾವು
ಶಿವಮೊಗ್ಗ: ಟ್ರ್ಯಾಕ್ಟರ್ ಪಲ್ಟಿಯಾಗಿ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಾಲೂಕಿನ ಹಸೂಡಿ ಫಾರಂ ಬಳಿ ನಡೆದಿದೆ.
ಈಶ್ವರ್‌ಮೃತಪಟ್ಟ ಕೂಲಿ ಕಾರ್ಮಿಕ. ಚಾಲಕ ವಿನಾಯಕ ಮೂರ್ತಿ, ಮಂಜುನಾಥ್, ನಾಗರಾಜ, ನಾಗಪ್ಪ ಗಾಯಗೊಂಡಿದ್ದಾರೆ. ನಗರದ ಉಷಾ ನರ್ಸಿಂಗ್ ಹೋಂ ಬಳಿ ಇಟ್ಟಿಗೆ ಅನ್‌ಲೋಡ್ ಮಾಡಿ ಹಸೂಡಿಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ. ಅತೀ ವೇಗವಾಗಿ ಚಾಲನೆ ಮಾಡುತ್ತಿದ್ದರಿಂದ ನಿಯಂತ್ರಣ ಕಳೆದುಕೊಂಡ ಚಾಲಕ ಪಕ್ಕದ ತೋಟಕ್ಕೆ ಡಿಕ್ಕಿ ಹೊಡೆಸಿದ್ದಾನೆ. ಈ ವೇಳೆ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಈಶ್ವರ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com