ದೊಡ್ಡಮುತ್ತಪ್ಪ ಸ್ಮರಣಾರ್ಥ ಸಾಮೂಹಿಕ ವಿವಾಹ
ಭದ್ರಾವತಿ: ಸಾಮೂಹಿಕ ವಿವಾಹಗಳಿಂದ ಆರ್ಥಿಕವಾಗಿ ಹಿಂದುಳಿದವರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ ನುಡಿದರು.
ಕಾಗೆಹಳ್ಳದ ಶ್ರೀ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ದಿ. ದೊಡ್ಡಮುತ್ತಪ್ಪನವರ ಸ್ಮರಣಾರ್ಥ ಏರ್ಪಡಿಸಿದ್ದ ಉಚಿತ ಸರಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿ, ಸಮಾಜದಲ್ಲಿ ಇಂತಹ ಕಾರ್ಯಗಳು ಹೆಚ್ಚು ಹೆಚ್ಚು ನಡೆಯಬೇಕೆಂದರು.
ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು ಇಂದು ಸಮಾಜದಲ್ಲಿ ವಿದ್ಯಾವಂತರು ಮತ್ತು ಸುಶಿಕ್ಷಿತರು ಹೆತ್ತ ತಂದೆ-ತಾಯಿಯರನ್ನು ಉಪೇಕ್ಷಿಸುತ್ತಿರುವ ಸಂದರ್ಭದಲ್ಲಿ ತಮಗೆ ಜನ್ಮಕೊಟ್ಟವರ ಸ್ಮರಣಾರ್ಥ ಗ್ರಾಮೀಣ ಪ್ರದೇಶದಲ್ಲಿ ಸಾಮೂಹಿಕ ವಿವಾಹವನ್ನು ಏರ್ಪಡಿಸಿರುವುದು ಶ್ಲಾಘನೀಯ ಎಂದ ಅವರು, ಸ್ತ್ರೀ ಶೋಷಣೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಹೆಣ್ಣು ಆತ್ಮಸ್ಥೈರ್ಯದಿಂದ ಬದುಕುವ ಮೂಲಕ ಬುದ್ಧಿಶಕ್ತಿಯನ್ನು ಬೆಳೆಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಹೇಳಿದರು.
ಅರಕೆರೆ ವಿರಕ್ತ ಮಠದ ಧರ್ಮಾಧಿಕಾರಿ ಹಾಗೂ ಅನುಷ್ಠಾನ ಗುರುಗಳಾದ ಶ್ರೀ ಕರಿಸಿದ್ದೇಶ್ವರ ಸ್ವಾಮಿಗಳು ಇಂತಹ ಸಮಾರಂಭಗಳು ಹೆಚ್ಚು ನಡೆಯಬೇಕೆಂದರು. ಕಾರ್ಯಕ್ರಮದ ಆಯೋಜಕ ಶ್ರೀ ಚೌಡೇಶ್ವರಿ ದೇವಸ್ಥಾನದ ವ್ಯವಸ್ಥಾಪಕ ಚೌಡಪ್ಪ ಮಾತನಾಡಿ, ವರದಕ್ಷಿಣೆ ಪಿಡುಗನ್ನು ಹಾಗೂ ಅನಾವಶ್ಯಕ ವೆಚ್ಚವನ್ನು ನಿವಾರಿಸಲು ಸಾಮೂಹಿಕ ವಿವಾಹವನ್ನು ಏರ್ಪಡಿಸಿರುವುದಾಗಿ ತಿಳಿಸಿದರು. ಸಮಾರಂಭದಲ್ಲಿ ಎಂಟು ಜೋಡಿ ವಧೂವರರು ವಿವಾಹ ಜೀವನಕ್ಕೆ ಪದಾರ್ಪಣ ಮಾಡಿದರು.
ಸಮಾರಂಭದಲ್ಲಿ ಶ್ರೀ ಲಕ್ಷ್ಮಣಾರ್ಯ ಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಎಲ್. ಷಡಾಕ್ಷರಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಸುಜಾತ, ಎಪಿಎಂಸಿ ಅಧ್ಯಕ್ಷ ಮಣಿಶೇಖರ್, ಗೌರಮ್ಮ, ಸೋಮ್ಲಿಬಾಯಿ,
ಚೂಡಾಮಣಿ, ಪ್ರಕಾಶ್, ಅಂತೋಣಿ ಕ್ರೂಸ್, ನಾಗರಾಜ್, ಶೇಖರ್, ಸುಂದರ್ ಬಾಬು ಮೊದಲಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

