ಇನ್ನೂ ನಾಮಪತ್ರ ಸಲ್ಲಿಕೆಯಾಗಿಲ್ಲ

Updated on: 

ಶಿವಮೊಗ್ಗ: ಸ್ಥಳೀಯ ಪೌರಸಂಸ್ಥೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ರಾಜಕೀಯ ಪಕ್ಷಗಳು ಸರ್ಕಸ್ ಆರಂಭಿಸಿವೆ.   ಎಲ್ಲಾ ಪಕ್ಷಗಳೂ ಮೊದಲು ಪಟ್ಟಿ ಪ್ರಕಟಿಸಲು ಹಿಂದೆಮುಂದೆ ನೋಡುತ್ತಿದ್ದಾರೆ. ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಸೋಮವಾರವೂ ಸಹ ಇಡೀ ಜಿಲ್ಲೆಯಲ್ಲಿ ಯಾರೂ ನಾಮಪತ್ರ ಸಲ್ಲಿಸಿಲ್ಲ. ರಾಜ್ಯದಲ್ಲಿ ಹಾಗೂ ಶಿವಮೊಗ್ಗ ನಗರಸಭೆಯಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸುತ್ತಿದ್ದು, ಮಂಗಳವಾರ ಬಿಡುಗಡೆಯಾಗುವ ನಿರೀಕ್ಷೆ ಇದೆ. ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೆಜೆಪಿ ಪಟ್ಟಿಯೂ ಸಹ ಅಂತಿಮ ಹಂತದಲ್ಲಿದೆ. ಉಳಿದ ಪಕ್ಷಗಳು ಕಾದುನೋಡುವ ತಂತ್ರ ಅನುಸರಿಸುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com