ಪಕ್ಷಗಳಲ್ಲಿ ತಳಮಳದ ಚುನಾವಣಾ ಸಿದ್ಧತೆ
ಶಿವಮೊಗ್ಗ: ಸಂಕಟ, ತಳಮಳದ ನಡುವೆ ಸ್ಥಳೀಯ ಸಂಸ್ಥೆ ಚುನಾವಣೆಗೆ ರಾಜಕೀಯ ಪಕ್ಷಗಳು ನಿಧಾನವಾಗಿ ಸಜ್ಜಾಗುತ್ತಿವೆ.
ಜಿಲ್ಲೆಯಲ್ಲಿ ನಾಮಪತ್ರ ಸಲ್ಲಿಕೆಗೆ ಒಟ್ಟು 21 ಕೇಂದ್ರ ತೆರೆದು ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿ ಮೂರು ದಿನ ಕಳೆದರೂ ಈವರೆಗೆ ಒಂದು ನಾಮಪತ್ರವೂ ಸಲ್ಲಿಕೆಯಾಗಿಲ್ಲ.
ಇಲ್ಲಿಯವರೆಗೂ ಪ್ರಮುಖ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಕೂಡ ಬಿಡುಗಡೆ ಮಾಡುವ ಗೋಜಿಗೆ ಹೋಗಿಲ್ಲ. ಎಲ್ಲ ಪಕ್ಷಗಳಿಗಿಂತ ಮೊದಲೇ ಬಿಜೆಪಿ ಶಿವಮೊಗ್ಗ ನಗರಸಭೆಯ ಎಲ್ಲ 35 ವಾರ್ಡ್ಗಳ ಅಭ್ಯರ್ಥಿಗಳ ಪಟ್ಟಿಯನ್ನು ಫೆ.20ರಂದು ಏಕಕಾಲದಲ್ಲಿ ಬಿಡುಗಡೆ ಮಾಡಲಿದೆ.
ಕಾರ್ಯತಂತ್ರ: ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಅಲ್ಲಲ್ಲಿ ಕಾಣಿಸಿಕೊಂಡ ಬಂಡಾಯವನ್ನು ಶಮನ ಮಾಡಿ ಪಟ್ಟಿ ಬಿಡುಗಡೆ ಮಾಡುವ ಧಾವಂತದಲ್ಲಿ ಬಿಜೆಪಿ ಇದೆ. ಅದೇ ರೀತಿ ಮುಂದೆ ಆಗಬಹುದಾದ ಬಂಡಾಯವನ್ನು ಶಮನ ಮಾಡುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿದೆ.
ಕಳೆದ ಚುನಾವಣೆ ಬಾರಿ ಗೆಲವು ಸಾಧಿಸಿದವರ ಪೈಕಿ ಇಬ್ಬರನ್ನು ಹೊರತುಪಡಿಸಿ ಉಳಿದೆಲ್ಲರಿಗೂ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದೆ. ಅದೇ ರೀತಿ ಹಾಲಿ ನಗರಸಭಾ ಅಧ್ಯಕ್ಷ ಚನ್ನಬಸಪ್ಪ ತಮ್ಮ ವಾರ್ಡ್ ಬದಲಿಸುವುದು ಬಹುತೇಕ ನಿಶ್ಚಿತವಾಗಿದೆ.
ಮತ್ತೊಂದೆಡೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಕೂಡ ಸಿದ್ಧವಾಗಿದೆ. ಕಾಂಗ್ರೆಸ್ ಪಟ್ಟಿ ಸಿದ್ಧಪಡಿಸುವ ತರಾತುರಿಯಲ್ಲಿದ್ದು, ಪಕ್ಷದ ಕಚೇರಿಗೆ ಆಕಾಂಕ್ಷಿಗಳ ದೊಡ್ಡ ಹಿಂಡೇ ಸೇರಿದೆ. ಆಕಾಂಕ್ಷಿಗಳ ಪಟ್ಟಿ ದೊಡ್ಡದಿರುವ ಕಾರಣ ಆ ಪಕ್ಷದ ಮುಖಂಡರು ಪಟ್ಟಿ ಅಂತಿಮಗೊಳಿಸಲು ಹರಸಾಹಸ ಪಡುವಂತಾಗಿದೆ.
ಇಂದು ಪಟ್ಟಿ ಬಿಡುಗಡೆ ಸಾಧ್ಯತೆ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ವಿಧಾನಪರಿಷತ್ ಸದಸ್ಯೆ ಗಾಯತ್ರಿ, ಎರಡು ಬ್ಲಾಕ್ಗಳ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ, ಇಸ್ಮಾಯಿಲ್ ಖಾನ್ ಅವರಿರುವ ತಂಡ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಆಕಾಂಕ್ಷಿಗಳಿಂದ ಅರ್ಜಿ ಸ್ವೀಕಾರ ಕಾರ್ಯ ನಡೆದಿದ್ದು, ಬುಧವಾರ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ.
ಇನ್ನೊಂದೆಡೆ ಕೆಜೆಪಿಯಲ್ಲಿ ಕೂಡ ಸ್ಪರ್ಧಾಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು, ಅಲ್ಲೂ ಕೂಡ ಪೈಪೋಟಿ ಏರ್ಪಟ್ಟಿದೆ. ಪ್ರತಿ ವಾರ್ಡ್ನಲ್ಲಿ 3-4 ಸ್ಪರ್ಧಾಕಾಂಕ್ಷಿಗಳು ಕಂಡುಬಂದಿದ್ದಾರೆ. ಪಕ್ಷದ ಮುಖಂಡರು ಅರ್ಹರನ್ನು ಗುರುತಿಸುವ ಕಾರ್ಯ ನಡೆಸಿದ್ದು, ಬುಧವಾರ ಸಂಜೆ ವೇಳೆ ಪಟ್ಟಿ ಅಂತಿಮಗೊಳ್ಳುವ ನಿರೀಕ್ಷೆ ಆ ಪಕ್ಷದ ಮುಖಂಡರದ್ದು.
ಬೇರೆ ಬೇರೆ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡವರು, ಸ್ಥಳೀಯರು, ಅರ್ಹರನ್ನು ಗುರುತಿಸಿ ಟಿಕೆಟ್ ನೀಡಲಾಗುತ್ತದೆ. ಶೇ.50ರಷ್ಟು ಪಟ್ಟಿ ಅಂತಿಮಗೊಂಡಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಜ್ಯೋತಿಪ್ರಕಾಶ್ ತಿಳಿಸಿದ್ದಾರೆ.
ನೀತಿ ಸಂಹಿತೆ ಉಲ್ಲಂಘಿಸಿದ ಡಿಸಿಎಂ
ಸ್ಥಳೀಯ ಸಂಸ್ಥೆಗಳ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸಿಲುಕಿದ್ದಾರೆ.
ಕೆ.ಎಸ್. ಈಶ್ವರಪ್ಪರವರು ಶಿವಮೊಗ್ಗ ನಗರದಲ್ಲಿ ವಿದ್ಯಾರ್ಥಿ ನಿಲಯಕ್ಕೆ ಶಂಕುಸ್ಥಾಪನೆ ಮಾಡಿರುವ ಕುರಿತಂತೆ ಮಾಹಿತಿ ಬಂದಿದ್ದು, ಇದು ನೀತಿ-ಸಂಹಿತೆ ಉಲ್ಲಂಘನೆಯಾಗಲಿದೆಯೇ ಎಂಬುವುದರ ಕುರಿತಂತೆ ತನಿಖೆ ನಡೆಸುವಂತೆ ನೋಡಲ್ ಅಧಿಕಾರಿಯಾಗಿರುವ ಉಪ ವಿಭಾಗಾಧಿಕಾರಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಇಲ್ಲಿನ ಬುದ್ಧ ನಗರದಲ್ಲಿ ಸೋಮವಾರ ಸಂಜೆ ಕೆ.ಎಸ್. ಈಶ್ವರಪ್ಪನವರು ಛತ್ರ್ರಪತಿ ಶಿವಾಜಿ ಮರಾಠ ಟ್ರಸ್ಟ್ ಹಾಗೂ ಕರ್ನಾಟಕ ಕ್ಷತ್ರಿಯ ಮರಾಟ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು.
ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಹ್ವಾನಿತರಾಗಿದ್ದ ವಿಧಾನ ಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್, ಆರ್.ಕೆ. ಸಿದ್ದರಾಮಣ್ಣ, ನಗರಸಭೆ ಅಧ್ಯಕ್ಷ ಚನ್ನಬಸಪ್ಪ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಗೈರು ಹಾಜರಾಗಿದ್ದರು.
ಪ್ರಕರಣ ಕುರಿತು “OÚ«ÚsÚ®ÚúڒOæQ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್, ನೀತಿ ಸಂಹಿತೆ ಉಲ್ಲಂಘನೆ ವಿಚಾರವಾಗಿ ಮಾಹಿತಿ ಬಂದಿದೆ. ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಚುನಾವಣಾಧಿಕಾರಿಯಾಗಿರುವ ಉಪ ವಿಭಾಗಾಧಿಕಾರಿಯವರಿಗೆ ಸೂಚಿಸಿದ್ದೇನೆ. ವರದಿ ಬಂದ ನಂತರ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದರು.
ಯಾವುದೇ ಗೊಂದಲವಿಲ್ಲದೇ ಪಕ್ಷ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಗಿಸಿದೆ. ಚುನಾವಣೆಯನ್ನು ಎದುರಿಸಲು ಎಲ್ಲಾ ತಯಾರಿಸಿ ನಡೆಸಿದೆ. ಬದಲಾವಣೆಯಿರುವ ಅಭ್ಯರ್ಥಿಗಳ ಪಟ್ಟಿ ಬುಧವಾರ ಪ್ರಕಟಗೊಳ್ಳಲಿದೆ.
- ಡಿ.ಎಸ್. ಅರುಣ್, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ
ಶೇ.50ರಷ್ಟು ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಪ್ರತಿ ಕ್ಷೇತ್ರದಲ್ಲೂ 3-4 ಮಂದಿ ಸ್ಪರ್ಧಾಕಾಂಕ್ಷಿಗಳಿದ್ದಾರೆ. ಸಂಘ ಸಂಸ್ಥೆ, ಸಮಾಜ ಸೇವೆ ಮತ್ತು ಆಯಾ ವಾರ್ಡ್ನ ಸ್ಥಳೀಯರನ್ನೇ ಆಯ್ಕೆ ಮಾಡಲಾಗುತ್ತಿದೆ.
- - ಜ್ಯೋತಿಪ್ರಕಾಶ್, ಕೆಜೆಪಿ ಜಿಲ್ಲಾಧ್ಯಕ್ಷ
ಪಕ್ಷದ ಹಿರಿಯರ ತಂಡ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಸ್ಪರ್ಧಾಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಅದನ್ನು ಪರಿಶೀಲನೆ ನಡೆಸಿ ಅಂತಿಮ ಪಟ್ಟಿ ಬುಧವಾರ ಸಂಜೆ ವೇಳೆಗೆ ಸಿದ್ಧವಾಗಲಿದೆ.
- - ಕೆ.ಬಿ. ಪ್ರಸನ್ನಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ನಗರಸಭಾಧ್ಯಕ್ಷರ ವಾರ್ಡ್ ಶಿಫ್ಟ್
ಹಾಲಿ ನಗರಸಭಾಧ್ಯಕ್ಷ ಎಸ್.ಎನ್. ಚನ್ನಬಸಪ್ಪ 12ನೇ ವಾರ್ಡ್ ಬದಲು 5ನೇ ವಾರ್ಡ್ನಿಂದ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದೆರಡು ಬದಲಾವಣೆ ಹೊರತುಪಡಿಸಿ ಹಾಲಿ ಬಿಜೆಪಿ ಸದಸ್ಯರು ಅದೇ ವಾರ್ಡ್ಗಳಿಂದ ಸ್ಪರ್ಧಿಸಲಿದ್ದಾರೆ.
ಜೆಡಿಎಸ್ನ ಇಬ್ಬರು ಸದಸ್ಯರು ಮಾತ್ರ ಶಿವಮೊಗ್ಗ ನಗರಸಭೆಯಲ್ಲಿದ್ದರು. 19ನೇ ವಾರ್ಡ್ ಉಪಚುನಾವಣೆಯಲ್ಲಿ ಆಯ್ಕೆಯಾಗಿದ್ದ ಈ ಪಕ್ಷದ ನಾಗರಾಜ ಕಂಕಾರಿ ಅದೇ ವಾರ್ಡ್ನಿಂದ ಸ್ಪರ್ಧಿಸಲಿದ್ದು, ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್ನ ವಿಪಕ್ಷ ನಾಯಕ ಮರಿಯಪ್ಪ ವಾರ್ಡ್ ಬದಲಿಸುವ ಚಿಂತನೆಯಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

