ಶಿವಮೊಗ್ಗ

ಸಮರ್ಥ ಆಡಳಿತ ನೀಡುವಲ್ಲಿ ಬಿಜೆಪಿ ವಿಫಲ: ಆರೋಪ

Published On :

ಸಾಗರ: ನಗರಸಭೆಯಲ್ಲಿ ಬಿಜೆಪಿ ಸಮರ್ಥ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆರೋಪಿಸಿದರು.
ಪಟ್ಟಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಪಕ್ಷದ ನಗರ ಕಾರ್ಯಕರ್ತರ ಸಮಾವೇಶದಲ್ಲಿ ಬೇರೆ ಬೇರೆ ಪಕ್ಷಗಳಿಂದ ಕಾಂಗ್ರೆಸ್ಸಿಗೆ ಸೇರ್ಪಡೆಗೊಂಡವರನ್ನು ಬರಮಾಡಿಕೊಂಡು, ಕಳೆದ ಐದು ವರ್ಷದ ಅವಧಿಯಲ್ಲಿ ಬಿಜೆಪಿ ಜನರಿಗೆ ಒಂದು ನಿವೇಶನ ನೀಡದೆ ಬಡವರ ವಿರೋಧಿಯಾಗಿ ವರ್ತಿಸಿದೆ ಎಂದು ದೂಷಿಸಿದರು.
ಕಾಂಗ್ರೆಸ್‌ಗೆ ಹೆಚ್ಚಿನ ಅವಕಾಶ: ಕಳೆದ ಅವಧಿಯಲ್ಲಿ ನಗರಸಭೆ ಆಡಳಿತ ಕಾಂಗ್ರೆಸ್ಸಿನ ಕೈತಪ್ಪಿದ್ದರಿಂದ ಜನರು ಅನೇಕ ಸಮಸ್ಯೆಗಳನ್ನು ನೋಡುವ ಜೊತೆಗೆ, ಅಭಿವೃದ್ಧಿಯಲ್ಲಿ ಪೂರ್ಣ ಹಿಂದೆ ಬೀಳುವಂತಾಗಿದೆ. ಬಿಜೆಪಿ ಪ್ರಮುಖರು ನಗರ ಅಭಿವೃದ್ಧಿಯನ್ನು ಕಡೆಗಣಿಸಿ ಕೇವಲ ಸ್ವಹಿತಕ್ಕಾಗಿ ಕೆಲಸ ಮಾಡಿದ್ದಾರೆ. ಈಗಾಗಲೇ ಬಿಜೆಪಿ ಎರಡು ಹೋಳಾಗಿದ್ದು, ಕೆಜೆಪಿ ಸ್ಥಾಪನೆಯಾಗಿದೆ. ಇದರಿಂದ ಕಾಂಗ್ರೆಸ್ ಗೆಲುವಿಗೆ ಹೆಚ್ಚಿನ ಅವಕಾಶವಿದೆ. ಕಾರ್ಯಕರ್ತರು ಪಕ್ಷವನ್ನು ನಗರಸಭಾ ಚುನಾವಣೆಯಲ್ಲಿ ಗೆಲ್ಲಿಸುವ ನಿಟ್ಟಿನಲ್ಲಿ ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಕನ್ನಡಸೇನೆಯ ಜಿಲ್ಲಾಧ್ಯಕ್ಷ ಟಿಪ್‌ಟಾಪ್ ಬಶೀರ್, ಮ್ಯಾಮ್ಕೋಸ್ ನಿರ್ದೇಶಕ ಎಲ್.ಟಿ. ತಿಮ್ಮಪ್ಪ, ಟಿಪ್‌ಟಾಪ್ ತಸ್ರೀಫ್, ಫ್ರಾನ್ಸಿಸ್ ಗೋಮ್ಸ್, ರಫಿಕ್ ಕಾಂಗ್ರೆಸ್ಸಿಗೆ ಸೇರ್ಪಡೆಗೊಂಡರು. ಪಕ್ಷದ ಪ್ರಮುಖರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.