ಕಾರ್ಮಿಕ ಸಂಘಟನೆಗಳ ಮುಷ್ಕರ
ಶಿವಮೊಗ್ಗ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ರಾಷ್ಟ್ರವ್ಯಾಪಿ ಕರೆದಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಕಾರ್ಮಿಕ ಸಂಘಟನೆಗಳು ನಡೆಸಿದವು.
ಬೆಲೆ ನಿಯಂತ್ರಣ, ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದು ಮಾಡಬೇಕು, ಕನಿಷ್ಠ ರು. 10 ಸಾವಿರ ವೇತನ ಹಾಗೂ ಸಾರ್ವಜನಿಕ ಕ್ಷೇತ್ರದ ಉದ್ಯಮಗಳನ್ನು ಖಾಸಗೀಕರಣ ಮಾಡಬಾರದು. ಗ್ರಾಮ ಪಂಚಾಯಿತಿ ಗುತ್ತಿಗೆ ನೌಕರರನ್ನು ಖಾಯಂ ನೌಕರರೆಂದು ಪರಿಗಣಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘ, ಎಪಿಎಂಸಿ, ಗ್ರಾಮ ಪಂಚಾಯಿತಿ ನೌಕರರ ಸಂಘ, ಜಿಲ್ಲಾ ಅಕ್ಷರ ದಾಸೋಹ, ಬಿಸಿ ಊಟ ನೌಕರರ ಸಂಘ, ಆಶಾ ಕಾರ್ಯಕರ್ತೆಯರು, ಅಡಕೆ ಮಂಡಿ ಕಾರ್ಮಿಕರು, ಹಾಲು ಒಕ್ಕೂಟದ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದನ್ನು ಹೊರತುಪಡಿಸಿ ನಗರದ ಕೆಲ ಖಾಸಗಿ ಶಾಲೆಗಳು ರಜೆ ನೀಡಿದ್ದವು. ಉಳಿದಂತೆ ಜನಜೀವನ ಎಂದಿನಂತಿತ್ತು.
ಸೊರಬದಲ್ಲಿ...
ಸೊರಬ: ಜಿಲ್ಲಾ ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿ ಕರೆದಿದ್ದ ದೇಶವ್ಯಾಪಿ ಕಾರ್ಮಿಕರ ಐಕ್ಯ ಮುಷ್ಕರಕ್ಕೆ ತಾಲೂಕು ಗ್ರಾಮ ಪಂಚಾಯತಿ ನೌಕರರ ಸಂಘ ಹಾಗೂ ಆಶಾ ಕಾರ್ಯಕರ್ತೆಯರು, ಕಾರ್ಮಿಕರು ಕೈಜೋಡಿಸಿದ್ದು, ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಾಲೂಕು ತಹಸೀಲ್ದಾರರ ಮೂಲಕ ಮನವಿ ಸಲ್ಲಿಸಿದರು.
ಬೆಲೆ ಏರಿಕೆಯ ನಿಯಂತ್ರಣ, ಉದ್ಯೋಗ ಸೃಷ್ಟಿ, ನಿವೃತ್ತಿ ವೇತನ ಮೊದಲಾದ 10 ಅಂಶಗಳ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಜನ ವಿರೋಧಿ ನೀತಿಯನ್ನು ಬದಲಾಯಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಸಂಘದ ಗೌರವಾಧ್ಯಕ್ಷೆ ಶೇಖರಮ್ಮ, ಗ್ರಾಪಂ ನೌಕರರ ಸಂಘದ ಅಧ್ಯಕ್ಷ ಸುಬ್ರಾಯಶೇಟ್, ನಾಗರಾಜ್, ನಿಂಗರಾಜ್, ಮಂಜಪ್ಪ, ನಿಂಗಪ್ಪ, ಚೆನ್ನಬಸಪ್ಪ, ಆಶಾ ಕಾರ್ಯಕರ್ತೆಯರಾದ ಯಶೋಧ, ಮಂಜುಳಾ, ಶ್ಯಾಮಲ, ಮಂಜುಳ, ನಾಗರತ್ನ, ಗಿರಿಜಮ್ಮ, ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

