ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಪ್ರತಿಭಟನೆ
ಶಿವಮೊಗ್ಗ: ಕಾವೇರಿ ಐ ತೀರ್ಪಿನ ಅಧಿಸೂಚನೆಯನ್ನು ಗೆಜೆಟ್ನಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಲು ಮುಂದಾಗಿರುವ ಕ್ರಮ ವಿರೋಧಿಸಿ ಗುರುವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಾವೇರಿ ಕರುನಾಡಿನ ಜೀವನಾಡಿಯಿದ್ದಂತೆ. ಈ ಭಾಗದ ಲಕ್ಷಾಂತರ ಜನರು ಈ ನದಿಯನ್ನು ನಂಬಿ ತಮ್ಮ ಬದುಕು ಸಾಗಿಸುತ್ತಿದ್ದಾರೆ. ಆದರೆ, 2007ರ ಸುಪ್ರೀಂ ಕೋರ್ಟ್ ಆದೇಶದ ಅನುಷ್ಠಾನ ನೆಪದಲ್ಲಿ ಕೇಂದ್ರ ಸರ್ಕಾರ ಗೆಜೆಟ್ನಲ್ಲಿ ಐ ತೀರ್ಪು ಪ್ರಕಟಿಸಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಬಿಜೆಪಿ ನೇತೃತ್ವದ ಸರ್ಕಾರ ಒಳಜಗಳದಲ್ಲಿ ಮುಳುಗಿದ್ದು, ಸುಪ್ರಿಂಕೋರ್ಟ್ ಹಾಗೂ ಕೇಂದ್ರ ಸರ್ಕಾರಕ್ಕೆ ಕಾವೇರಿ ಭಾಗದ ಜನರ ವಾಸ್ತವ ಸ್ಥಿತಿಗತಿಯನ್ನು ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದೆ. ಅಲ್ಲದೇ ರಾಜ್ಯ ಸರ್ಕಾರ ಐ ತೀರ್ಪನ್ನು ಪ್ರಶ್ನಿಸುವ ಗೋಜಿಗೆ ಹೋಗದೇ, ಗೆಜೆಟ್ನಲ್ಲಿ ಪ್ರಕಟಿಸಲು ಸುಪ್ರೀಂ ಕೋರ್ಟ್ ತಿಳಿಸಿದ ನಂತರ ದೆಹಲಿಗೆ ತನ್ನ ನಿಯೋಗವನ್ನು ಕಳುಹಿಸಿ, ಪ್ರವಾಸ ಮುಗಿಸಿ ಬರಿಗೈಯಲ್ಲಿ ಹಿಂತಿರುಗಿದೆ ಎಂದು ಆಪಾದಿಸಿದರು.
ರಾಜ್ಯದ ಸಂಸದರು ಕೂಡ ಈ ವಿಚಾರವನ್ನು ಪ್ರಶ್ನಿಸದಿರುವುದು ಬೇಸರತಂದಿದೆ. ಆದ್ದರಿಂದ ಸಂಸದರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿ ರೈತರ ಹಿತಕಾಯುವಲ್ಲಿ ಸಹಕರಿಸಬೇಕು. ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವೇದಿಕೆಯಿಂದ ಹೋರಾಟ ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಪ್ರಶಾಂತ್, ಉಪಾಧ್ಯಕ್ಷ ಧನಂಜಯ, ಕಾರ್ಯದರ್ಶಿ ಶಿವಕುಮಾರ್, ನಾಗರಾಜ, ಲಕ್ಷ್ಮೀ ನಾಗೇಶ್, ನಾಗರತ್ನ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

