ಶಿವಮೊಗ್ಗ

ರಸ್ತೆ ಡಾಂಬರೀಕರಣಕ್ಕೆ ಆಗ್ರಹಿಸಿ ಮನವಿ

Published On :

ಶಿವಮೊಗ್ಗ: ಎಪಿಎಂಸಿ ಅಧಿಕಾರಿಗಳು ರಸ್ತೆ ಡಾಂಬರೀಕರಣದ ನೆಪದಲ್ಲಿ ಲಕ್ಷಾಂತರ ರುಪಾಯಿ ಹಣ ಪೋಲು ಮಾಡುತ್ತಿದ್ದು, ಕೂಡಲೇ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅವರಿಗೆ ಮನವಿ ಅರ್ಪಿಸಿದರು.
 ಎಪಿಎಂಸಿಯಲ್ಲಿರುವ ರಸ್ತೆಗಳು ಉತ್ತಮವಾಗಿದ್ದು, ಸಂಚಾರಕ್ಕೆ ಯೋಗ್ಯವಾಗಿವೆ. ಆದರೂ ಉತ್ತಮವಾಗಿರುವ ರಸ್ತೆಯ ಮೇಲೆ ಮತ್ತೆ ಮರು ಡಾಂಬರೀಕರಣ ಮಾಡಲಾಗುತ್ತಿದೆ. 2-3 ಇಂಚಿನಷ್ಟು ಟಾರ್ ರಸ್ತೆ ಹಾಗೂ ಅದರ ಮೇಲೆ 1ರಿಂದ 2 ಇಂಚಿನಷ್ಟು ಸಣ್ಣ ಜೆಲ್ಲಿ ಟಾರ್ ಹಾಕಲಾಗುತ್ತಿದೆ. ಇದರಿಂದ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಲಾಗುತ್ತಿದೆ ಎಂದು ಸಂಘಟನೆ ಆಪಾದಿಸಿದೆ.
ಈ ಹಿಂದೆಯೇ ಡಾಂಬರೀಕರಣ ವಿರೋಧಿಸಿ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಎಪಿಎಂಸಿ ಆಡಳಿತ ವರ್ಗ ಕೆಲ ಸಮಯದವರೆಗೆ ಡಾಂಬರೀಕರಣ ಕೆಲಸ ನಿಲ್ಲಿಸಿತ್ತು. ಇದೀಗ ಮತ್ತೆ ಡಾಂಬರೀಕರಣ ಪ್ರಕ್ರಿಯೆ ಆರಂಭಿಸಿದೆ ಎಂದು ವೇದಿಕೆ ದೂರಿದೆ.
ಕೂಡಲೇ ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ ಅಭಿಯಂತರರಿಂದ ಸೂಕ್ತ ವರದಿ ತರಿಸಿಕೊಳ್ಳಬೇಕು. ಅನಾವಶ್ಯಕ ಕಾಮಗಾರಿ ನಿಲ್ಲಿಸಬೇಕು. ಪ್ರಸ್ತುತ ಕಾಮಗಾರಿಗೆ ವೆಚ್ಚ ಮಾಡಲಾಗಿರುವ ಹಣವನ್ನು ಸಂಬಂಧಪಟ್ಟ ಅಧಿಕಾರಿಗಳಿಂದಲೇ ವಸೂಲು ಮಾಡಬೇಕು ಎಂದು ವೇದಿಕೆ ಒತ್ತಾಯಿಸಿತು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಹೋರಾಟ ಸಮಿತಿಯ ಪ್ರಮುಖ ವಸಂತ ಕುಮಾರ್, ಅಶೋಕ್ ಯಾದವ್, ರವಿ, ಆನಂದ, ಕಲ್ಹಣ, ಮಂಜುನಾಥ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.