ಶಿವಮೊಗ್ಗ

ಬೆಂಕಿ ಅನಾಹುತಗಳ ಬಗ್ಗೆ ಎಚ್ಚರ ವಹಿಸಿ

Published On :

ಜೋಗ್‌ಫಾಲ್ಸ್: ಬೆಂಕಿಯಿಂದಾಗುವ ಅವಘಡಗಳಿಗೆ ಸಂಬಂಧಿಸಿ ಮುನ್ನೆಚರಿಕಾ ಕ್ರಮಗಳನ್ನು ಕೈಗೊಂಡಲ್ಲಿ ಅಪಾಯವನ್ನು ತಪ್ಪಿಸಲು ಸಾಧ್ಯ ಎಂದು ಶಿವಮೊಗ್ಗ ವಲಯದ ಪ್ರಾದೇಶಿಕ ಅಗ್ನಿ ಶಾಮಕ ಅಧಿಕಾರಿ ಕೆ. ಶಿವಕುಮಾರ್ ತಿಳಿಸಿದರು.
 ಮಹಾಗಣಪತಿ ಸಮುದಾಯ ಭವನದಲ್ಲಿ ಶಿವಮೊಗ್ಗ ಅಗ್ನಿ ಶಾಮಕ ಠಾಣೆಯ ಸಹಯೋಗದೊಂದಿಗೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಆಶ್ರಯದಲ್ಲಿ ನಡೆದ ಅಗ್ನಿ ಅವಘಡಗಳಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅವರು ಮಾಹಿತಿ ನೀಡಿದರು.
 ಮಾಹಿತಿ ಕಾರ್ಯಕ್ರಮದಲ್ಲಿ ನಿಗಮದ ಮುಖ್ಯ ಅಭಿಯಂತರ ಜಿ.ಹನುಮಂತಪ್ಪ, ನಿಗಮದ ಸುರಕ್ಷತಾಧಿಕಾರಿ ಎಂ. ಹೇಮಂತರಾಜು, ಎಸ್.ಕೆ. ಶಿವರಾಮ್ ಸೇರಿದಂತೆ ಮತ್ತಿತರರು ಇದ್ದರು. ಈ ಸಂದರ್ಭದಲ್ಲಿ ಬೆಂಕಿ ನಂದಿಸುವ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.