ಶಿವಮೊಗ್ಗ

ಪರ್ಯಾಯ ವ್ಯವಸ್ಥೆಗೆ ಮನವಿ

Published On :

ಶಿವಮೊಗ್ಗ: ತಮಗೆ ವ್ಯಾಪಾರ ನಡೆಸಲು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಮೆಗ್ಗಾನ್ ಆಸ್ಪತ್ರೆ ಸಮೀಪದ ಬೀದಿ ಬದಿ ವ್ಯಾಪಾರಿಗಳು ಜಿಲ್ಲಾಧಿಕಾರಿಯವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಕಳೆದ ಹಲವಾರು ವರ್ಷಗಳಿಂದ ಮೆಗ್ಗಾನ್ ಆಸ್ಪತ್ರೆ ಸುತ್ತಮುತ್ತಲು ಹಣ್ಣು, ಎಳನೀರು, ಬ್ರೆಡ್ ಸೇರಿದಂತೆ ಇತರೆ ವಸ್ತುಗಳ ವ್ಯಾಪಾರ ನಡೆಸುತ್ತಿದ್ದು ಇದರಿಂದಲೇ ಜೀವನ ನಿರ್ವಹಣೆ ಮಾಡುತ್ತಿದ್ದೇವೆ. ಆದರೆ ಕಳೆದ 1  ತಿಂಗಳಿನಿಂದ ಸಂಚಾರಿ ಠಾಣೆ ಪೊಲೀಸರು ಆಸ್ಪತ್ರೆ ಸುತ್ತಮುತ್ತಲು ವ್ಯಾಪಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ. ನೂರಾರು ರುಪಾಯಿ ದಂಡ ವಿಧಿಸುತ್ತಿದ್ದಾರೆ. ವ್ಯಾಪಾರ ಮಾಡದಂತೆ ತಡೆಯೊಡ್ಡುತ್ತಿದ್ದಾರೆ ಎಂದು ವ್ಯಾಪಾರಿಗಳು ದೂರಿದರು.
ಪ್ರತಿದಿನ ರು. 100, 200 ಸಂಪಾದನೆ ಮಾಡಿ ಜೀವನ ನಡೆಸುತ್ತಿರುವ ತಮ್ಮ ಮೇಲೆ ಪೊಲೀಸರು ದಂಡ ವಿಧಿಸುತ್ತಿರುವುದು ಸರಿಯಲ್ಲ. ಹಾಗೆಯೇ ಇನ್ನು ಮುಂದೆ ಇಲ್ಲಿ ವ್ಯಾಪಾರ ಮಾಡದಂತೆ ಸೂಚಿಸಿದ್ದಾರೆ. ಇದು ತಮ್ಮಲ್ಲಿ ಆತಂಕ ಮೂಡಿಸಿದೆ ಎಂದು ವ್ಯಾಪಾರಿಗಳು ಮನವಿಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಕೂಡಲೇ ಮಧ್ಯ ಪ್ರವೇಶ ಮಾಡಿ ವ್ಯಾಪಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ವ್ಯಾಪಾರಿಗಳು ಮನವಿಯಲ್ಲಿ ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.