ಶಿವಮೊಗ್ಗ

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Published On :

ಶಿವಮೊಗ್ಗ: ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ-4, ಬೆರಳಚ್ಚುಗಾರ-5, ಬೆರಳಚ್ಚು ನಕಲುಗಾರ-2 ಮತ್ತು ಜವಾನ-12 ಹುದ್ದೆಗಳಿಗೆ ಅರ್ಹ ವ್ಯಕ್ತಿಗಳನ್ನು ಭರ್ತಿ ಮಾಡಲು ಉದ್ದೇಶಿಸಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರಬೇಕು. ಮೀಸಲಾತಿ ಅನ್ವಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 35 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 38 ವರ್ಷ ಹಾಗೂ ಪರಿಶಿಷ್ಟ ಜಾತಿ, ವರ್ಗಗಳ ಅಭ್ಯರ್ಥಿಗಳು 40 ವರ್ಷ ವಯೋವುತಿಯೊಳಗಿನವರಾಗಿರಬೇಕು. ಅಂಗವಿಕಲರಿಗೆ ಹಾಗೂ ವಿಧವೆಯರಿಗೆ 10 ವರ್ಷಗಳ ಸಡಿಲಿಕೆ ಇದೆ.
ಆಸಕ್ತರು ನಿಗದಿತ ನಮೂನೆಯ ಅರ್ಜಿಗಳನ್ನು ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 30ರೊಳಗಾಗಿ ಸಲ್ಲಿಸಬೇಕು. ವಿವರಗಳಿಗಾಗಿ ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಶಿವಣ್ಣ ಪ್ರವಾಸ
ಶಿವಮೊಗ್ಗ: ಕೇಂದ್ರ ಸರ್ಕಾರದ ಪರಿಶಿಷ್ಟ ಜಾತಿ-ಜನಾಂಗಗಳ ರಾಷ್ಟ್ರೀಯ ಆಯೋಗದ ಸದಸ್ಯ ಎಂ. ಶಿವಣ್ಣ ಫೆ.25ರಂದು ರಾತ್ರಿ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. 26ರಂದು ಶಿವಮೊಗ್ಗದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಪಾಲ್ಗೊಳ್ಳುವರು. ಅಂದು ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡುವರು. 27ರಂದು ಬೆಳಿಗ್ಗೆ 10 ಗಂಟೆಗೆ ಭದ್ರಾವತಿಯಲ್ಲಿ ನಡೆಯುವ ವಿಐಎಸ್‌ಎಲ್ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.