ಶಿವಮೊಗ್ಗ

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಅಮೆರಿಕ ರೋಟರಿ ಪ್ರತಿನಿಧಿಗಳು

Published On :

ಶಿವಮೊಗ್ಗ: ನಗರದಲ್ಲಿ ಭಾನುವಾರ ನಡೆದ 2ನೇ ಸುತ್ತಿನ ಪಲ್ಸ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಶರಾವತಿ ನಗರದ ಕಿಡ್ ಶಾಲೆ ಆವರಣದಲ್ಲಿ ನಡೆಸಲಾಯಿತು. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ನಗರದ ಎಲ್ಲಾ 7 ರೋಟರಿ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ಅವರು ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಪಂ ಸಿಇಒ ಶಶಿಕಾಂತ್ ಸಂಥಿಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಶಿವಣ್ಣ ರೆಡ್ಡಿ, ರಾಜ್ಯ ನೋಡಲ್ ಅಧಿಕಾರಿ ಡಾ.ಜಯರಾಜ್, ರಾಷ್ಟ್ರೀಯ ಪಲ್ಸ್ ಪೋಲಿಯೋ ಉಪಾಧ್ಯಕ್ಷ ಡಾ. ಪಿ. ನಾರಾಯಣ್, ವೈದ್ಯಾಧಿಕಾರಿ ರಘುನಂದನ್, ಮಲ್ನಾಡ್ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಪಾಂಡುರಂಗ ಹೆಗ್ಗಡೆ, ರೋಟರಿ ಕ್ಲಬ್‌ನ ಪ್ರಮುಖರಾದ ಕೆ.ಬಿ.ರವಿಶಂಕರ್, ರೋಟರಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಜಿ. ವಿಜಯಕುಮಾರ್, ಎಂ.ಪಿ. ಆನಂದಮೂರ್ತಿ, ಆದಿಮೂರ್ತಿ, ಜಿ.ಎನ್.ಎನ್. ಪ್ರಕಾಶ್, ಡಾ. ಆರ್.ಡಿ. ಪ್ರಭು, ರವಿ, ಇನ್ನರ್ ವೀಲ್ ಕ್ಲಬ್‌ನ ಮಾಜಿ ಅಧ್ಯಕ್ಷೆಯಾದ ಅನಿತಾ ರವಿಶಂಕರ್, ಕಾರ್ಯದರ್ಶಿ ಬಿಂಧು ವಿಜಯಕುಮಾರ್ ಹಾಗೂ ನಗರದ ಏಳು ರೋಟರಿ ಕ್ಲಬ್‌ಗಳ ಅಧ್ಯಕ್ಷರು, ಪದಾಧಿಕಾರಿಗಳು ಸದಸ್ಯರು ಇದ್ದರು.
ಪರಿಶೀಲನೆ: ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದ ಅಮೆರಿಕಾದ 10 ರೋಟರಿ ಸದಸ್ಯರ ತಂಡ ಶಿವಮೊಗ್ಗ ನಗರಕ್ಕೆ ಆಗಮಿಸಿತ್ತು. ಈ ತಂಡದಲ್ಲಿ ಜನ್ನಿಫರ್ ಡಿ ಲೆನಿನ್, ಹೀಥರ್ ಹಬ್ರಟ್, ಎಲಿನ್ ಲೊಚಿ, ಮೇರಿ ಪುಲ್ಲಿನ್, ಬ್ರನ್ನನ್, ಮಾಡಿಲಾನ್ ಸೇರಿದಂತೆ ಮೊದಲಾದವರಿದ್ದರು. ಇವರು ಕೂಡ ಮಕ್ಕಳಿಗೆ ಪೋಲಿಯೋ ಹನಿ ಹಾಕಿದರು. ಹಾಗು ನಗರ ಎಲ್ಲ ಪೋಲಿಯೋ ಬೂತ್‌ಗಳಿಗೆ ಭೇಟಿ ನೀಡಿದ್ದರು.
ಲಸಿಕೆ ಕಡ್ಡಾಯ: ಸಮಾರಂಭದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಸಮಿತಿ ಉಪಾಧ್ಯಕ್ಷ ಡಾ. ಪಿ. ನಾರಾಯಣ್ ಮಾತನಾಡಿ, 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕಲಾಗುತ್ತಿದೆ. ಪೋಷಕರು ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಈ ಮೂಲಕ ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿ ಮಾಡಬೇಕು ಎಂದು ಕರೆ ನೀಡಿದರು. ರೋಟರಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಜಿ. ವಿಜಯಕುಮಾರ್ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.