ಶಿವಮೊಗ್ಗ

ಗೋಪಾಲಕೃಷ್ಣ ಸೇರ್ಪಡೆಗೆ ಜಿಲ್ಲಾ ಕಾಂಗ್ರೆಸ್ ವಿರೋಧ

Published On :

ಶಿವಮೊಗ್ಗ: ಇತ್ತ ಬಿಜೆಪಿಯಲ್ಲಿ ವಿಶ್ವಾಸ ಕಳೆದುಕೊಂಡು, ಅತ್ತ ಕರ್ನಾಟಕ ಜನತಾ ಪಕ್ಷವನ್ನು ಸೇರಲಾಗದೆ ಕಾಂಗ್ರೆಸ್ಸೇ ಗತಿ ಎಂದು ವರಿಷ್ಠರ ಮನವೊಲಿಸಲು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ದೆಹಲಿಗೆ ಹಾರಿದ್ದರೆ, ಜಿಲ್ಲಾ ಕಾಂಗ್ರೆಸ್ ಸಮಿತಿಯು ಅವರನ್ನು ಯಾವ ಕಾರಣಕ್ಕೂ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಬಾರದೆಂದು ಕೆಪಿಸಿಸಿಗೆ ಪತ್ರ ಬರೆದಿದೆ.
   ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದು, ಕಳೆದ ಐದು ವರ್ಷಗಳ ಕಾಲ ಕಾಂಗ್ರೆಸ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ.
   ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರ ವೈಯಕ್ತಿಕ ತೇಜೋವಧೆ ಮಾಡಿದ್ದಾರೆ. ಆದ್ದರಿಂದ ಯಾವ ಕಾರಣಕ್ಕೂ ಅವರನ್ನು ಸೇರಿಸಿಕೊಳ್ಳಬಾರದು ಎಂದಿದ್ದಾರೆ.
ಸದೃಢವಾಗಿದೆ: ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರ ನೇತೃತ್ವದಲ್ಲಿ ಸದೃಢವಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು ಸಾಧಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.
   ಬೇಳೂರು ಗೋಪಾಲಕೃಷ್ಣ ಅವರು ಮಾದ್ಯಮಗಳ ಮೂಲಕ ಕಾಂಗ್ರೆಸ್ ಸೇರುವುದಾಗಿ ಸ್ವಯಂ ಘೋಷಿಸಿಕೊಂಡಿದ್ದಾರೆ.
  ಇದರಿಂದ ಸಾಗರ ಕ್ಷೇತ್ರದ ಕಾಂಗ್ರೆಸ್ ಜನಪ್ರತಿನಿಧಿಗಳು, ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದಾರೆ. ಯಾವ ಕಾರಣಕ್ಕೂ ಬೇಳೂರು ಅವರನ್ನು ಸೇರಿಸಿಕೊಳ್ಳದಂತೆ ಜಿಲ್ಲಾ ಕಾಂಗ್ರೆಸ್‌ಗೆ ಮನವಿ ಮಾಡಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷರು ಕೆಪಿಸಿಸಿ ಅಧ್ಯಕ್ಷರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.