ಶಿವಮೊಗ್ಗ

ರಸ್ತೆ ಅಗಲೀಕರಣ ಪ್ರಕ್ರಿಯೆ ದಬ್ಬಾಳಿಕೆ: ಆರೋಪ

Published On :

ಸೊರಬ: ಇಲ್ಲಿನ ಮುಖ್ಯ ರಸ್ತೆ ಅಗಲೀಕರಣ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಕಾರಿ, ಜನಪ್ರತಿನಿಧಿಗಳು ಕಾನೂನು ಪಾಲಿಸದೆ, ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಪಟ್ಟಣ ಮುಖ್ಯ ರಸ್ತೆ ನಿವಾಸಿಗಳು ದೂರಿದ್ದಾರೆ.  ರಸ್ತೆ ಅಗಲೀಕರಣ ಪ್ರಕ್ರಿಯೆಯಲ್ಲಿನ ಲೋಪದೋಷ ಕುರಿತಂತೆ ಮಾಹಿತಿ ನೀಡಿರುವ ಅವರು, ಈ ಮೊದಲು ಕಾನೂನು ಪ್ರಕಾರ ರಸ್ತೆ ವಿಸ್ತರಣೆ ಆಗಲಿ ಎಂದು ಕೆಲವರು ಹೈಕೋರ್ಟ್ ಮೊರೆ ಹೋಗಿದ್ದು, ಪ್ರಸ್ತುತ ಮತ್ತೆ 20 ನಿವಾಸಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಒಳ ಒಪ್ಪಂದದ ಆರೋಪ: ಮುಖ್ಯ ರಸ್ತೆ ನಿವಾಸಿಗಳಲ್ಲೇ ಕೆಲವರು ಉನ್ನತ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಮೊದಲೇ ಒಳ ಒಪ್ಪಂದ ಮಾಡಿಕೊಂಡಿದ್ದರಿಂದ ಈ ಹಿಂದೆ ನಡೆದ ಜಿಲ್ಲಾಧಿಕಾರಿ ಸಭೆಯಲ್ಲಿ ತುಸು ಗೊಂದಲ ಉಂಟಾಯಿತು. ಅಂದೂ ಸಹಾ ಹಲವು ನಿವಾಸಿಗಳು ಭೂಸ್ವಾಧೀನ ಪ್ರಕ್ರಿಯೆ ಮೂಲಕ ವಿಸ್ತರಣೆ ಆಗಲಿ ಎಂದಿದ್ದೆವು. ಈಗಲೂ ಇದೇ ಪ್ರಕ್ರಿಯೆಗೆ ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.
ಆದರೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅಧಿಕೃತ ತಿಳಿವಳಿಕೆ ಪತ್ರ ನೀಡದೆ, ಮಾರ್ಕಿಂಗ್ ನಡೆಸಿದ್ದು, ಕಾನೂನು ಬಾಹಿರವಾಗಿದೆ. ಉಚ್ಚ ನ್ಯಾಯಾಲಯದ ಆದೇಶವನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್, ಪಪಂ ಮುಖ್ಯಾಧಿಕಾರಿ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕಾನೂನು ಬದ್ಧ ನೋಟಿಸ್ ನೀಡಲಾಗಿದೆ ಎಂದರು.
ಸೂಕ್ತ ಉತ್ತರ ಬಾರದಿದ್ದಲ್ಲಿ ಇವರ ಮೇಲೆ ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗುವುದು ಎಂದು ತಿಳಿಸಿದ್ದು, ರಸ್ತೆ ಅಗಲೀಕರಣಕ್ಕಾಗಿ ಅಧಿಕಾರಿ, ಜನಪ್ರತಿನಿಧಿಗಳು ನಿವಾಸಿಗಳ ಮೇಲೆ ಧಮಕಿ ಹಾಕುತ್ತಿದ್ದಾರೆ. ವಿಸ್ತರಣೆ ಕುರಿತಂತೆ ಸಮರ್ಪಕ ಅಳತೆ ಇತ್ಯಾದಿ ಕುರಿತು ಮಾಹಿತಿ ನೀಡುತ್ತಿಲ್ಲ ಎಂದರು.
ಇದೇ ರೀತಿ ಕಾನೂನು ವಿರೋಧಿ ಚಟುವಟಿಕೆಗಳು ನಡೆದಲ್ಲಿ ಮುಖ್ಯ ರಸ್ತೆ ಹಿತರಕ್ಷಣಾ ಸಮಿತಿಯಿಂದ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.