ಶಿವಮೊಗ್ಗ

ತರಗತಿಗಳ ಪ್ರವೇಶಕ್ಕೆ ಆಗ್ರಹಿಸಿ ಪ್ರತಿಭಟನೆ

Published On :

ಭದ್ರಾವತಿ: ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಎಲೆಕ್ಟ್ರಾನಿಕ್ ಕಮ್ಯೂನಿಕೇಶನ್ ವಿಷಯದ ತರಗತಿಗಳಿಗೆ ಪ್ರವೇಶವನ್ನು ಪ್ರಕಟಣೆ ಮಾಡಿಲ್ಲವೆಂದು ಆರೋಪಿಸಿ ಎಬಿವಿಪಿ ಪ್ರತಿಭಟನಾ ಮೆರವಣಿಗೆ ನಡೆಸಿತು.
ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ತಹಸೀಲ್ದಾರರ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಸರ್ಕಾರವು ಕಂಪ್ಟೂಟರ್ ಸೈನ್ಸ್ ಮತ್ತು ಎಲೆಕ್ಟ್ರಾನಿಕ್ ಕಮ್ಯೂನಿಕೇಶನ್ ವಿಷಯಗಳನ್ನು ಪಾಲಿಟೆಕ್ನಿಕ್‌ಗಳಲ್ಲಿ ಪ್ರಾರಂಭಿಸಲು ಅನುಮತಿ ನೀಡಿದ್ದು, ಶಿವಮೊಗ್ಗ, ಸಾಗರ ಮತ್ತಿತರ ನಗರಗಳಲ್ಲಿ ಈಗಾಗಲೇ ಪ್ರವೇಶ ಪ್ರಕ್ರಿಯೆಯನ್ನು ಪೂರೈಸಿ ತರಗತಿಗಳನ್ನು ಪ್ರಾರಂಭಿಸಿದ್ದರೂ ಭದ್ರಾವತಿಯಲ್ಲಿ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡಿಲ್ಲ. ಈ ಬಗ್ಗೆ ಅಭಾವಿಪ ಹಿಂದೆಯೇ ಪಾಲಿಟೆಕ್ನಿಕ್ ಪ್ರಾಂಶುಪಾಲರಿಗೆ ಮನವಿ ನೀಡಿದ್ದರೂ ಅದನ್ನು ಉಪೇಕ್ಷಿಸಲಾಗಿದೆ. ಕೂಡಲೇ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಿ ಈ ಬಗ್ಗೆ ಪ್ರಕಟಣೆ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದೆ.
ಎಬಿವಿಪಿ ನಗರ ಕಾರ್ಯದರ್ಶಿ ಶ್ರೀನಿಧಿ, ತಾಲೂಕು ಸಂಚಾಲಕ ಶಿವಶಂಕರ್, ನಗರ ಸಹಕಾರ್ಯದರ್ಶಿ ಅರುಣ್, ಕಾರ್ಯಕರ್ತರಾದ ವಿನಯ್, ವೇಣು, ಜಗದೀಶ್ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.