ಪ್ರಾಣಿ ಶವ ಸಂಸ್ಕಾರಕ್ಕೆ ನಗಸಭೆಯಿಂದ ಜಾಗ
ಶಿವಮೊಗ್ಗ: ನಗರದಲ್ಲಿ ಸತ್ತಪಶುಗಳಿಗೆ ಶವಸಂಸ್ಕಾರದ ಜಾಗವನ್ನು ನಗರಸಭೆಯಿಂದ ಹುಡುಕಲಾಗಿದೆ ಎಂದು ನಗರಸಭೆ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ ಹೇಳಿದರು.
ನಗರದಲ್ಲಿ ಕರ್ನಾಟಕ ಪಶುವೈದ್ಯಕೀಯ ಸಂಘ ಜಿಲ್ಲಾ ಘಟಕ ಬುಧವಾರ ಹಮ್ಮಿಕೊಂಡಿದ್ದ ತಾಂತ್ರಿಕ ವಿಚಾರ ಸಂಕಿರಣದಲ್ಲಿ ಅವರು, ಪಶು ಶವಸಂಸ್ಕಾರಕ್ಕೆ ನಗರಸಭೆಯಿಂದ ಜಾಗ ಗುರುತಿಸಿ, ಸುಡುವುದು ಅಥವಾ ಹೂಳುವುದರ ಬಗ್ಗೆ ಚಿಂತನೆ ಮಾಡಲಾಗಿದೆ. ಏಕೆಂದರೆ ನಗರದಲ್ಲಿ ಅಲ್ಲಲ್ಲಿ ಪ್ರಾಣಿಗಳು ಸಾಯುತ್ತಿರುವುದು ಕಂಡುಬಂದಿದೆ. ಅಲ್ಲದೇ ಅವುಗಳನ್ನು ಎಲ್ಲೆಂದರಲ್ಲಿ ಹೂಳುವುದರಿಂದ ಹಲವಾರು ಸಮಸ್ಯೆಗಳು ಎದುರಾಗುತ್ತಿವೆ. ಆದ್ದರಿಂದ ನಗರಸಭೆ ಈ ನಿರ್ಧಾರ ಕೈಗೊಂಡಿದೆ ಎಂದರು.
ಹೆಚ್ಚು ಅಧ್ಯಯನ ಮಾಡಿದಾಗ ಮಾತ್ರ ವೈದ್ಯಕೀಯ ಕ್ಷೇತ್ರದಲ್ಲಿ ಯಶಸ್ಸು ಕಾಣಲು ಸಾಧ್ಯ. ಈ ಹಿನ್ನಲೆಯಲ್ಲಿ ಪ್ರಾಣಿಗಳ ಬಗ್ಗೆ ಅಧ್ಯಯನ ಮಾಡಿ ಅವುಗಳ ನೋವಿಗೆ ಸ್ಪಂದಿಸಿ ಹಾಗೂ ಅವುಗಳ ರೋಗಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದಿರಿ. ಆದ್ದರಿಂದ ನಿಮ್ಮ ಕೆಲಸ ಶ್ಲಾಘನೀಯ ಎಂದರು.
ಜಿಲ್ಲಾ ಪಶುವೈದ್ಯ ಸಂಘದ ಅಧ್ಯಕ್ಷ ಡಾ.ಎಸ್.ಡಿ. ಗುರುಪ್ರಸಾದ್, ಕರ್ನಾಟಕ ಪಶುವೈದ್ಯಕೀಯ ಪರಿಷತ್ ಅಧ್ಯಕ್ಷ ಡಾ.ವಿ. ಚಂದ್ರಶೇಖರಮೂರ್ತಿ, ಪಶುಪಾಲನೆ ಇಲಾಖೆ ಉಪನಿರ್ದೇಶಕ ಡಾ.ಆರ್.ಆರ್. ರವೀಂದ್ರ, ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ಎಂ. ದೇವರಾಜ್, ಕಾರ್ಯದರ್ಶಿ ಡಾ. ಶಿವಶರಣಪ್ಪ ಜಿ. ಯಲಗೋಡ್, ಪಶುವೈದ್ಯಕೀಯ ಕಾಲೇಜು ಪ್ರಾಧ್ಯಾಪಕ ಡಾ.ಕೆ.ಸಿ. ವೀರಣ್ಣ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

