ಶಿವಮೊಗ್ಗ: ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ 64ನೇ ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಳಿಗ್ಗೆ 6 ಗಂಟೆಗೆ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಉಪಸ್ಥಿತಿಯಲ್ಲಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಧ್ವಜಾರೋಹಣ ನೆರವೇರಿಸುವರು. ಮುಖ್ಯ ಅತಿಥಿಯಾಗಿ ಸಂಸದ ಬಿ.ವೈ. ರಾಘವೇಂದ್ರ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ಎಂಪಿಎಂ ಅಧ್ಯಕ್ಷ ಆರಗ ಜ್ಞಾನೇಂದ್ರ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ, ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ, ಶಾಸಕ ಎಚ್. ಹಾಲಪ್ಪ, ಬೇಳೂರು ಗೋಪಾಲಕೃಷ್ಣ, ಸಂಗಮೇಶ್ವರ, ಕುಮಾರಸ್ವಾಮಿ, ಕಿಮ್ಮನೆ ರತ್ನಾಕರ, ಕ್ಯಾಪ್ಟನ್ ಗಣೇಶ್ ಕಾರ್ಣೀಕ್, ಸಿದ್ದರಾಮಣ್ಣ, ಭಾರತಿ ಶೆಟ್ಟಿ, ಪ್ರೊ. ಕೃಷ್ಣಭಟ್, ಎಂ.ಬಿ. ಭಾನುಪ್ರಕಾಶ್, ಕಾಡಾ ಅಧ್ಯಕ್ಷ ಗಿರೀಶ್ ಪಟೇಲ್, ನಗರಸಭಾಧ್ಯಕ್ಷ ಚನ್ನಬಸಪ್ಪ, ಸೂಡಾ ಅಧ್ಯಕ್ಷ ದತ್ತಾತ್ರಿ ಪಾಲ್ಗೊಳ್ಳುವರು.
ಸಂಜೆ 4 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಗರಸಭಾ ಉಪಾಧ್ಯಕ್ಷ ಎಸ್. ರಮೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಜಿಪಂ ಉಪಾಧ್ಯಕ್ಷೆ ಹೇಮಾ ಪಾವನಿ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ, ತಾಪಂ ಅಧ್ಯಕ್ಷೆ ದೇವಿಬಾಯಿ ಧರ್ಮನಾಯ್ಕ, ಹಾಲು ಒಕ್ಕೂಟದ ಅಧ್ಯಕ್ಷ ಜಗದೀಶ್ವರ್ ಹಾಗೂ ಎಪಿಎಂಸಿ ಅಧ್ಯಕ್ಷ ಎಸ್. ಮಹೇಂದ್ರನಾಥ್ ಉಪಸ್ಥಿತರಿರುವರು.