ಶಿವಮೊಗ್ಗ

ಏತ ನೀರಾವರಿ ಸ್ಥಗಿತ ಖಂಡಿಸಿ ಪ್ರತಿಭಟನೆ

Published On :

ಶಿವಮೊಗ್ಗ: ತುಂಗಾ ಏತ ನೀರಾವರಿ ಸ್ಥಗಿತಗೊಂಡಿರುವುದನ್ನು ಖಂಡಿಸಿ ತುಂಗಾ ಏತ ನೀರಾವರಿ ಪಕ್ಷಾತೀತ ಹೋರಾಟ ಸಮಿತಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
    ಸವಳಂಗ ರಸ್ತೆಯ ರೇಲ್ವೆ ಗೇಟ್ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿತು.  
ತ    ಾಲೂಕಿನ ಹೊಳಲೂರು ಹೋಬಳಿಯ ಕೊಮ್ಮನಾಳು ಗ್ರಾಮದ ಬೂದಿಗೆರೆ ಕೆರೆಯ ಏತ ನೀರಾವರಿ ಕಾಮಗಾರಿ ಸ್ಥಗಿತಗೊಂಡಿದೆ. ಕೂಡಲೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು. ಈ ಯೋಜನೆಯಿಂದ ಸುತ್ತಮುತ್ತಲಿನ ಗ್ರಾಮಗಳ ಕೃಷಿ ಹಾಗೂ ದನಕರುಗಳಿಗೆ ಕುಡಿಯುವ ನೀರಿಗೆ  ಅನುಕೂಲವಾಗಲಿದೆ.
   ಆದರೆ,  ಕಾಮಗಾರಿ ಪೂರ್ಣಗೊಳ್ಳದೆ ಇಲ್ಲಿನ ಜನರಿಗೆ ತೀವ್ರ ತೊಂದರೆ ಉಂಟಾಗಿದೆ ಎಂದು ಎಂದು ಪ್ರತಿಭಟನಾಕಾರರು ಆರೋಪಿಸಿದರು.
ನಿರ್ಲಕ್ಷ್ಯ ಧೋರಣೆ: 2007ರಲ್ಲಿ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಿದೆ. 2010ರಲ್ಲಿ ರು. 7.6 ಕೋಟಿ ಅನುದಾನ ನೀಡಿದೆ. ಕಾಮಗಾರಿಗೆ 25 ತಿಂಗಳು ಅವಧಿ ನೀಡಲಾಗಿತ್ತು. ಅನುದಾನ ಸಿಕ್ಕರೂ ಇಲ್ಲಿಯವರೆಗೂ ಕಾಮಗಾರಿ  ಆರಂಭವಾಗಿಲ್ಲ. ಕಾಮಗಾರಿ ಆರಂಭಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಈ ಕೆರೆಯ ವ್ಯಾಪ್ತಿಯಲ್ಲಿ ಬರುವ 8-10 ಗ್ರಾಮಗಳು ಸೇರಿಕೊಂಡಿದ್ದು, ಈಗ ಬರಗಾಲದ ಪ್ರದೇಶವಾಗಿದೆ. ಬರಗಾಲಕ್ಕೆ ಸಿಕ್ಕಿ ತತ್ತರಿಸಿ ಹೋಗಿದ್ದಾರೆ. ಕುಡಿಯುವ ನೀರಿಲ್ಲದೆ ಜನ- ಜಾನುವಾರಗಳು, ಕೃಷಿ ಬೆಳೆಗಳು, ನಾಶವಾಗಿದೆ.
ಈ ಸಂಬಂಧ ಯೋಜನೆಯ ಅನುಷ್ಠಾನಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದರು.
ದನಕರುಗಳನ್ನು ಕಟ್ಟಿ ಪ್ರತಿಭಟನೆ: ಕೂಡಲೇ ಸರ್ಕಾರ ಯೋಜನೆ ಅನುಷ್ಠಾನಕ್ಕೆ ಕ್ರಮಕೈಗೊಳ್ಳಬೇಕು. ಈ ಕುರಿತು ಜಿಲ್ಲಾಡಳಿತಕ್ಕೆ ಸೂಕ್ತ ನಿರ್ದೇಶನ ನೀಡಬೇಕು. ಕಾಮಗಾರಿ ಆರಂಭಿಸುವ ಕುರಿತಂತೆ ಜಿಲ್ಲಾಧಿಕಾರಿಗಳು ಅಧಿಕೃತ ಹೇಳಿಕೆ ನೀಡಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ದನಕರುಗಳನ್ನು ಕಟ್ಟಿ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
   ಪ್ರತಿಭಟನೆಯಲ್ಲಿ ಜಿಪಂ ಶಿಕ್ಷಣ- ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಗಾಯಿತ್ರಿ ಷಣ್ಮುಖಪ್ಪ, ತಾಪಂ ಮಾಜಿ ಅಧ್ಯಕ್ಷ ಷಣ್ಮುಖಪ್ಪ, ಸಮಿತಿ ಗೌರವಾಧ್ಯಕ್ಷ ಎಸ್. ತೀರ್ಥಪ್ಪ, ಸಮಿತಿ ಸಂಸ್ಥಾಪಕ ಕೆ.ಎಂ.  ಮಂಜಪ್ಪ, ತಾಪಂ ಸದಸ್ಯ ಕೆ.ಬಿ. ಚಂದ್ರಶೇಖರಪ್ಪ, ಮಾಜಿ ಶಾಸಕ ಜಿ.  ಬಸವಣ್ಣಪ್ಪ, ಚೌವನ್ ನಾಯಕ್ ಮತ್ತಿತರರು  ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.