ನಾಟಕ ವೀಕ್ಷಣೆಯಿಂದ ಒತ್ತಡ ಕಡಿಮೆ
ಶಿಕಾರಿಪುರ: ಆಧುನಿಕ ಜೀವನಶೈಲಿಯಿಂದಾಗಿ ನಿರಂತರ ಉದ್ವೇಗ, ಮಾನಸಿಕ ಖಿನ್ನತೆಗೆ ಒಳಗಾಗಿ ಮನುಷ್ಯನ ಆರೋಗ್ಯ ಹದಗೆಡುತ್ತಿದೆ. ಧಾರ್ಮಿಕ, ಆಧ್ಯಾತ್ಮಿಕ, ಐತಿಹಾಸಿಕ ನಾಟಕಗಳ ವೀಕ್ಷಣೆಯ ಮೂಲಕ ಮಾನಸಿಕ ಒತ್ತಡ ಕಡಿಮೆಗೊಳಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಸಂಸದ ರಾಘವೇಂದ್ರ ಹೇಳಿದರು.
ಪಟ್ಟಣದ ಮುರುಘರಾಜೇಂದ್ರ ವಿರಕ್ತಮಠದಿಂದ ಜಗಜ್ಯೋತಿ ಬಸವೇಶ್ವರ ಯುವ ಬಳಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಚಿತ್ರದುರ್ಗದ ಜಮುರಾ ಕಲಾವಿದರಿಂದ ನಡೆದ ಮಹಾಕ್ರಾಂತಿ ಹಾಗೂ ನೀಲಿ ಕುದುರೆ ಎಂಬ ಧಾರ್ಮಿಕ ನಾಟಕವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪ್ರಬಲ ಮಾಧ್ಯಮ: ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಸ್ಥಳೀಯ ವಿರಕ್ತಮಠದ ಚನ್ನಬಸವ ಸ್ವಾಮೀಜಿ, ಚಿತ್ರದುರ್ಗದ ಜಮುರಾ ಕಲಾವಿದರು ಪ್ರದರ್ಶಿಸುತ್ತಿರುವ ಧಾರ್ಮಿಕ ನಾಟಕಗಳು ಸಮಾಜವನ್ನು ಸಕಾರಾತ್ಮಕವಾಗಿ ಬದಲಿಸುವ ಬಹು ಪ್ರಬಲ ರಂಗ ಮಾಧ್ಯಮವಾಗಿದೆ. ಮಹಾಕ್ರಾಂತಿ ನಾಟಕ ವೀಕ್ಷಿಸಿದ ಹಲವರಲ್ಲಿ ಪರಿಣಾಮವನ್ನು ಬೀರಿದೆ ಎಂದರು.
ಇಂತಹ ನಾಟಕದ ಮೂಲಕ ಸಮಾಜದಲ್ಲಿನ ನ್ಯೂನತೆ ಎತ್ತಿ ಹಿಡಿದು ಹೊಸ ಸಮಾಜವನ್ನು ಕಟ್ಟಬಹುದಾಗಿದೆ. ಸ್ಥಳೀಯರು ಹೆಚ್ಚಿನ ರೀತಿಯಲ್ಲಿ ಆಗಮಿಸಿ ಪ್ರೋತ್ಸಾಹಿಸುವ ಮನೋಭಾವ ಬೆಳೆಸಿಕೊಳ್ಳಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರರನ್ನು ಅಭಿನಂದಿಸಲಾಯಿತು. ತಹಸೀಲ್ದಾರ್ ಶಿವಕುಮಾರ್, ಕನ್ನಡ ಸಂಸ್ಕೃತಿ ಇಲಾಖೆ ಸಹನಿರ್ದೇಶಕ ಹರಿಕುಮಾರ್, ಮಂಜುನಾಥ್, ಉಮೇಶ್ ಬಣಕಾರ್ ಮತ್ತಿತರರು ಉಪಸ್ಥಿತರಿದ್ದರು. ಹದಡಿ ಪ್ರವೀಣ ಸ್ವಾಗತಿಸಿ, ಮಹೇಶ್ ನಿರೂಪಿಸಿ, ಸುಭಾಷಚಂದ್ರ ಸ್ಥಾನಿಕ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

