ಶಿವಮೊಗ್ಗ

ವಿಶ್ವರೂಪಂ ಪ್ರದರ್ಶನ ಬೇಡ: ಡಿಸಿಗೆ ಮನವಿ

Published On :

ಶಿವಮೊಗ್ಗ: ವಿಶ್ವರೂಪಂ ಚಲನಚಿತ್ರ ಪ್ರದರ್ಶನ ನಿಷೇಧಿಸುವಂತೆ ಒತ್ತಾಯಿಸಿ ಮರ್ಕಾಜಿ ಸುನ್ನಿ ಜಮೈತುಲ್ ಉಲ್ಮ ಸಮಿತಿ ಜಿಲ್ಲಾಧಿಕಾರಿಯವರಿಗೆ ಸೋಮವಾರ ಮನವಿ ಅರ್ಪಿಸಿತು.
 ಸಮಾಜದ ಶಾಂತಿ-ಸುವ್ಯವಸ್ಥೆ ಹಾಗೂ ಸೌಹಾರ್ದತೆಗೆ ಭಂಗ ತರುವಂತಿರುವ ತಮಿಳು ಚಲನಚಿತ್ರ ವಿಶ್ವರೂಪಂ ನಿಷೇಧಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿರುವ ಸಂಘಟನೆ, ವಿಶ್ವರೂಪಂ ಚಲನಚಿತ್ರದಲ್ಲಿ ಮುಸ್ಲಿಂ ಧರ್ಮವನ್ನು ಅವಹೇಳನ ಮಾಡಲಾಗಿದೆ. ಇದರಿಂದ ಮುಸ್ಲಿಮರ  ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಮುಖಂಡರು ದೂರಿದ್ದಾರೆ.
 ಈ ಚಿತ್ರ ಬಿಡುಗಡೆಯಾಗಿರುವ ಸ್ಥಳಗಳಲ್ಲಿ ಕೋಮು ಗಲಭೆ, ಅಹಿತಕರ ಘಟನೆಗಳು ನಡೆದಿವೆ. ರಾಜ್ಯದ ವಿವಿಧೆಡೆಯೂ ಅಶಾಂತಿ ಸೃಷ್ಟಿಯಾಗಿದೆ. ಭದ್ರಾವತಿಯಲ್ಲಿಯೂ ಅಹಿತಕರ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂತಹ ಚಿತ್ರಗಳ ಪ್ರದರ್ಶನ ಅಗತ್ಯವಿಲ್ಲ ಎಂದು ಮುಖಂಡರು ತಿಳಿಸಿದರು.
ಶಾಂತಿ ಕದಡುವ ಸಾಧ್ಯತೆ: ವಿಶ್ವರೂಪಂ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದರಿಂದ ರಾಜ್ಯದಲ್ಲಿ ಶಾಂತಿ- ಸುವ್ಯವಸ್ಥೆ, ಸೌಹಾರ್ದತೆ ಕದಡುವ ಸಾಧ್ಯತೆ ಇರುತ್ತದೆ. ಎಂದು ಮನವಿಯಲ್ಲಿ ತಿಳಿಸಲಾಗಿದೆ.
 ಸಮಿತಿ ಜಿಲ್ಲಾಧ್ಯಕ್ಷ ಅಬ್ದುಲ್ ಸತ್ತಾರ್ ಬೇಗ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಫ್ತಾಬ್ ಪರ್ವೀಜ್ ಮೊದಲಾದವರು ಮನವಿ ನೀಡುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.