ಶಿವಮೊಗ್ಗ: ದುರ್ಗಿಗುಡಿಯ ರೇಣುಕಾ ಆಯುರ್ವೇದ ಚಿಕಿತ್ಸಾಲಯದಲ್ಲಿ ಜ.30ರಂದು ಮಧ್ಯಾಹ್ನ 1 ಗಂಟೆಯಿಂದ ಸಂಜೆ 5ರ ವರೆಗೆ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಅಧಿಕ ರಕ್ತದೊತ್ತಡ, ಅಸ್ತಮಾ, ಮಧುಮೇಹ, ಚರ್ಮ ರೋಗ ಮತ್ತು ಧೀರ್ಘಕಾಲಿನ ಮಂಡಿ, ಬೇನು ನೋವಿಗೆ ಸೂಕ್ತ ಚಿಕಿತ್ಸಾ ಸಲಹೆಗಳನ್ನು ನೀಡಲಾಗುವುದು ಎಂದು ಎಂ.ಕೆ. ಗುರುಪ್ರಸಾದ್ ತಿಳಿಸಿದ್ದಾರೆ. ವಿವರಗಳಿಗಾಗಿ- 9844485859.
ಉತ್ತಮ ಫಲಿತಾಂಶ
ಶಿವಮೊಗ್ಗ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2012-13ನೇ ಸಾಲಿನಲ್ಲಿ ನಡೆಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಎನ್.ಟಿ. ರಸ್ತೆ ರವಿವರ್ಮ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. 5 ಡಿಸ್ಟಿಕ್ಷನ್, 16 ಪ್ರಥಮ ದರ್ಜೆ, 13 ದ್ವಿತೀಯ ದರ್ಜೆ ಪಡೆದು ಉತೀರ್ಣರಾಗಿದ್ದಾರೆ. ವಿದ್ಯಾರ್ಥಿ ಕೆ.ಆರ್. ರಾಕೇಶ್ ಹೈಯರ್ ಗ್ರೇಡ್ ವಿಭಾಗದಲ್ಲಿ 515 ಅಂಕಗಳಿಸಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ನೇಮಕ
ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಜಿಲ್ಲಾ ಅಧ್ಯಕ್ಷರಾಗಿ ಎನ್.ಪಿ. ಧರ್ಮರಾಜ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷ ಧನಂಜಯ ಅವರ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಲಪ್ಪ ತಿಳಿಸಿದ್ದಾರೆ.