ಶಿವಮೊಗ್ಗ

ಅರ್ಜಿ ಆಹ್ವಾನ

Published On :

ಶಿವಮೊಗ್ಗ: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯು 2012-13ನೇ ಸಾಲಿನಲ್ಲಿ ಯುವಜನ ಸೇವೆ, ರಾಷ್ಟ್ರೀಯ ಅಭಿವೃದ್ಧಿ ಮತ್ತು ಸಮಾಜಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ 15ರಿಂದ 35ವರ್ಷ ವಯೋವುತಿಯೊಳಗಿನ ಯುವಕ-ಯುವತಿಯರನ್ನೊಳಗೊಂಡ ಯುವಕ-ಯುವತಿ ಸಂಘಗಳಿಗೆ ರಾಷ್ಟ್ರೀಯ ಯುವ ಪ್ರಶಸ್ತಿಯನ್ನು ನೀಡಲು ಉದ್ದೇಶಿಸಿದ್ದು, ಪ್ರಶಸ್ತಿಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ವಿಶ್ವವಿದ್ಯಾನಿಲಯ, ಕಾಲೇಜು, ಸ್ಥಳೀಯ ಅಭಿವೃದ್ಧಿ ಇಲಾಖೆಗಳು, ರಾಷ್ಟ್ರೀಯ ಯುವ ಸಂಘಗಳು, ಖಾಸಗಿ ಸಂಸ್ಥೆಗಳು, ಸಾರ್ವಜನಿಕ ಸಂಸ್ಥೆಗಳು, ನೆಹರೂ ಯುವಕೇಂದ್ರಗಳು ಪ್ರಸ್ತಾವನೆ ಸಲ್ಲಿಸಬಹುದಾಗಿದೆ. ಪ್ರಸ್ತಾವನೆಗಳನ್ನು ಪರಿಶೀಲಿಸಿ, ರಾಜ್ಯಮಟ್ಟದ ಆಯ್ಕೆಗಾಗಿ ಜಿಲ್ಲೆಯಿಂದ ಆಯ್ಕೆಯಾದ ಒಂದು ಸಾಂಘಿಕ  ಹಾಗೂ ಒಂದು ವೈಯಕ್ತಿಕ ಪ್ರಸ್ತಾವನೆಯನ್ನು ಜಿಲ್ಲಾ ಸಮಿತಿಯ ಶಿಫಾರಸ್ಸಿನೊಂದಿಗೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಿಗೆ ಕಳುಹಿಸಿಕೊಡಲಾಗುವುದು. ಅರ್ಜಿಯನ್ನು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 20ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್ ಅವರನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.