ಡೆಂಘೀ ಪೀಡಿತರಿಗೆ ಉಚಿತ ಪ್ಲೇಟ್ಲೆಡ್
ಶಿವಮೊಗ್ಗ: ಡೆಂಘೀ ಬಂದವರು ಯಾವ ಕಾರಣಕ್ಕೂ ಪ್ಲೇಟ್ಲೆಡ್ ಕೊರತೆಯಿಂದ ಬಳಲಬಾರದು. ಈ ಕಾರಣದಿಂದ ಯಾರ ಸಾವೂ ಆಗಬರಾದು. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 86 ಕೇಂದ್ರಗಳನ್ನು ತೆರೆಯಲಾಗಿದೆ. ಡೆಂಘೀ ಪೀಡಿತರಿಗೆ ಉಚಿತವಾಗಿ ಪ್ಲೇಟ್ಲೆಡ್ ನೀಡಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು.
ನಗರದಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು, ಮೊಟ್ಟ ಮೊದಲು ಸರ್ಕಾರಿ ಕಟ್ಟಡ ಹಾಗೂ ಜಾಗಗಳ ಸ್ವಚ್ಛತೆಗೆ ಸೂಚನೆ ನೀಡಲಾಗಿದೆ. ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇತರರಿಗೆ ಈ ಕಟ್ಟಡಗಳು ಮಾದರಿಯಾಗಿರಬೇಕು ಎಂದು ಹೇಳಿದರು.
ಲೆಕ್ಕ ಮಾಹಿತಿ: ಡೆಂಘೀ ಡೆತ್ ಆಡಿಟಿಂಗ್ ಕಮಿಟಿಯನ್ನು ರಾಜ್ಯಮಟ್ಟದಿಂದ ಹಿಡಿದು ವಾರ್ಡ್ ಮಟ್ಟದ ವರೆಗೆ ರಚಿಸಲಾಗಿದೆ. ಈ ಕಾಯಿಲೆಯಿಂದ ಬಳಲುತ್ತಿರುವವರ ಮಾಹಿತಿಯನ್ನು ಈ ಸಮಿತಿಯು ಕ್ರೋಢೀಕರಿಸಲಿದೆ ಎಂದು ಸಚಿವ ಖಾದರ್ ಹೇಳಿದರು.
ಮುಂದಿನ ವರ್ಷದಿಂದ ಜನವರಿ ತಿಂಗಳಿಂದಲೇ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಆರಂಭಿಸಲಾಗುವುದು. ವ್ಯಾಪಕ ಪ್ರಚಾರ ಕಾರ್ಯಕ್ರಮ ಕೈಗೊಳ್ಳಲಾಗುವುದು ಎಂದರು.
ಸಿಬ್ಬಂದಿ ಕೊರತೆ: ನಮ್ಮ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ತಜ್ಞ ವೈದ್ಯರು ಹಾಗೂ ಕಿರಿಯ ವೈದ್ಯರು ಸೇರಿದಂತೆ ಸುಮಾರು 2,500 ಹುದ್ದೆ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಇವರಿಗೆ ಇನ್ನೂ ನೇಮಕಾತಿ ಆದೇಶ ನೀಡಿಲ್ಲ ಎಂದರು.
ಉತ್ತರ ಕರ್ನಾಟಕಕ್ಕೆ ಅನ್ವಯವಾಗುವ ಕಲಂ 371 ಜಾರಿಯಾಗಿದ್ದರಿಂದ ತಾಂತ್ರಿಕ ತೊತೊಂದರೆ ಉಂಟಾಗಿತ್ತು. ಸದ್ಯವೇ ನೀಡಲಾಗುವುದು ಎಂದರು. ಇರುವವರೇ ಸಮರ್ಥವಾಗಿ ಕೆಲಸ ಮಾಡಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಸೇರಿದಂತೆ ಮುಖಂಡರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

