ಕಣಸೋಗಿ ಚನ್ನಬಸಪ್ಪಗೌಡ
ಕ.ಪ್ರ.ವಾರ್ತೆ, ಶಿರಾಳಕೊಪ್ಪ, ಜು.2
ಮಲ್ಲವ ಸಮಾಜದ ತಾಲೂಕು ಅಧ್ಯಕ್ಷ ಹಾಗೂ ಸಾಮಾಜಿಕ ಕಾರ್ಯಕರ್ತ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದ ಕಣಸೋಗಿ ಚನ್ನಬಸಪ್ಪಗೌಡ (61) ನಿಧರಾಗಿದ್ದಾರೆ.
ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಸೋಮವಾರ ರಾತ್ರಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಪ್ರಗತಿಪರ ರೈತರಾಗಿದ್ದ ಚೆನ್ನಬಸಪ್ಪಗೌಡ ಅವರು ಕನ್ನಡಸಾಹಿತ್ಯ ಪರಿಷತ್ ಕಾರ್ಯಕರ್ತರಾಗಿ ಶಿರಾಳಕೊಪ್ಪ ಭಾಗದ ಕಸಪ ಅಧ್ಯಕ್ಷರಾಗಿ, ಲಯನ್ಸ್ ಸಂಸ್ಥೆ ಅಧ್ಯಕ್ಷರಾಗಿ ಹಲವಾರು ಸಂಘ, ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.
ಮೃತರು ತಂದೆ ಪತ್ನಿ ಪುತ್ರಿ ಮಗ ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅಂತಿಮ ದರ್ಶನ: ಮೃತ ಚನ್ನಬಸಪ್ಪಗೌಡ ನವರ ಅಂತಿಮ ಕ್ರಿಯೆಯಲ್ಲಿ ತೊಗರ್ಸಿ ಮಹಂತ ದೇಶೀಕೇಂದ್ರ ಸ್ವಾಮಿಗಳು, ಪಂಚವಣ್ಣಿಗೆ ಮಠದ ಚೆನ್ನವೇರ ಸ್ವಾಮಿಗಳು, ಜಡೆ ಸಂಸ್ಥಾನದ ಡಾ.ಮಹಂತ ಸ್ವಾಮಿಗಳು ಹಿರೇಮಾಗಡಿ ಮುರಘರಾಜೇಂದ್ರ ಸ್ವಾಮಿಗಳು.
ಕೆಳದಿ ಮಠದ ಡಾ.ಮಹೇಶ್ವರ ಶಿವಾಚಾರ್ಯ ಸ್ವಾಮಿ,ಹಾಗು ಹೊಂಡದ ಮಠದ ಶಿವಾನಂದ ಸ್ವಾಮಿ, ಎಪಿಎಂಸಿ ಅಧ್ಯಕ್ಷ ಸಣ್ಣ ಹನುಮಂತಪ್ಪ, ತಾಪಂ ಮಾಜಿ ಅಧ್ಯಕ್ಷ ರೇವಣಪ್ಪ ಜಿಪಂ ಸದಸ್ಯರು ತಾಪಂ ಸದಸ್ಯರು ಹಾಗು ವಿವಿಧ ಭಾಗದಿಂದ ಆಗಮಿಸಿದ್ದ ನೂರಾರು ಜನರು ಮಳೆಯನ್ನು ಲೆಕ್ಕಿಸದೇ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದರು.
ಜೀವಣ್ಣ
ಶಿವಮೊಗ್ಗ: ನಗರದ ಸರ್.ಎಂ. ವಿಶ್ವೇಶ್ವರಯ್ಯ ಕೋ ಆಪರೇಟೀವ್ ಸೊಸೈಟಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜೀವಣ್ಣ (ಜೀವನ್ ಕುಲಕರ್ಣಿ) ಅಕಾಲಿಕ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ ಸೂಚಿಸಿದೆ.
ದುಃಖತಪ್ತ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

