ಶಿವಮೊಗ್ಗ

ಪಡಿತರ ವ್ಯವಸ್ಥೆ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಜು.2
ಪಡಿತರ ವಿತರಣೆ ಅವ್ಯವಸ್ಥೆ ಸರಿಪಡಿಸಲು ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯಕರ್ತರು ಮಂಗಳವಾರ ಆಹಾರ ನಾಗರಿಕ ಮತ್ತು ಸರಬರಾಜು ಇಲಾಖೆ ಮುಂಭಾಗ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ತಾಲೂಕಿನಲ್ಲಿ ಪಡಿತರ ವ್ಯವಸ್ಥೆ ಅಯೋವುಯವಾಗಿದೆ. ಹಲವು ನ್ಯಾಯಬೆಲೆ ಅಂಗಡಿಗಳಲ್ಲಿ ಗ್ಯಾಸ್ ಸಂಪರ್ಕ ಇದೆ ಎಂದು ಸೀಮೆಎಣ್ಣೆ ವಿತರಿಸದೆ ಬಡವರಿಗೆ ಅನ್ಯಾಯ ಮಾಡಲಾಗುತ್ತಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಕೇವಲ ಎರಡು ದಿನ ಮಾತ್ರ ಪಡಿತರ ವಿತರಣೆ ಮಾಡುತ್ತಿದ್ದು, ಇದರಿಂದ ಪಡಿತರ ಪಡೆಯಲು ಜನ ಸಾಮಾನ್ಯರು ತ್ರಾಸಪಡುವಂತಾಗಿದೆ ಎಂದು ವೇದಿಕೆ ಸದಸ್ಯರು ಆರೋಪಿಸಿದರು.
ಹಲವು ನ್ಯಾಯಬೆಲೆ ಅಂಗಡಿಗಳಲ್ಲಿ ಗ್ರಾಹಕರಿಗೆ ರಸೀದಿ ನೀಡದೆ ವಂಚಿಸುತ್ತಿದ್ದಾರೆ. ನಿಜವಾದ ಬಡವರಿಗೆ ಬಿಪಿಎಲ್ ಕಾರ್ಡ್ ಸಿಕ್ಕಿಲ್ಲ. ಅವೆಲ್ಲವೂ ಉಳ್ಳವರ ಪಾಲಾಗಿವೆ, ಕಡು ಬಡವರು ಇದರಿಂದ ವಂಚಿತರಾಗಬೇಕಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪಡಿತರ ವಿತರಣೆ ಅವ್ಯವಸ್ಥೆ ಸರಿಪಡಿಸಬೇಕು, ಅರ್ಹರಿಗೆ ಬಿಪಿಎಲ್ ಕಾರ್ಡ್ ಸಿಗಬೇಕು, ರಜಾದಿನ ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲೂ ಪಡಿತರ ವಿತರಣೆ ಮಾಡಬೇಕು, ಬಿಪಿಎಲ್ ನೀಡದೇ ವಂಚಿಸುತ್ತಿರುವ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮತೆಗೆದುಕೊಳ್ಳಬೇಕು ಹಾಗೂ ಗೋಪಾಳದಲ್ಲಿರುವ ಪಡಿತರ ಕಚೇರಿಯನ್ನು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿಗೆ ಅಥವಾ ತಹಸೀಲ್ದಾರ್ ಕಚೇರಿಗೆ ವರ್ಗಾಯಿಸಬೇಕು ಎಂದು ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಪ್ರಮುಖರಾದ ಮಂಜುನಾಥ, ನರಸಿಂಹ, ಶಾಂತಮ್ಮ, ರೀಟಮ್ಮ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.