ಶಿವಮೊಗ್ಗ

ಕುಟುಂಬ ಅಭಿವೃದ್ಧಿಗೆ ಮಹಿಳೆಯರು ಶ್ರಮಿಸಲಿ: ಶಾಸಕ ಅಪ್ಪಾಜಿ

Published On :

ಭದ್ರಾವತಿ: ಮಹಿಳೆಯರು ಅವಕಾಶವನ್ನು ಉಪಯೋಗಿಸಿಕೊಂಡು ತಮಗೆ ಸಿಗುವ ಸಾಲವನ್ನು ಸದುಪಯೋಗಪಡಿಸಿಕೊಂಡು ಕುಟುಂಬವನ್ನು ಅಭಿವೃದ್ಧಿ ಕಡೆ ಕೊಂಡೊಯ್ಯಬೇಕು ಎಂದು ಶಾಸಕ ಎಂ.ಜೆ. ಅಪ್ಪಾಜಿ ಸಲಹೆ ನೀಡಿದರು.
ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅರಳಿಕೊಪ್ಪ ವಲಯದ ತಾವರೆಘಟ್ಟ ಕಾರ್ಯಕ್ಷೇತ್ರದ ಸಿಂಗನಮನೆ ಒಕ್ಕೂಟದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು. ವಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸರ್ಕಾರ ಮಾಡದ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಂಸ್ಥೆಯ ರೂವಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಈ ನಾಡಿನ ಹೆಣ್ಣುಮಕ್ಕಳ ಆರ್ಥಿಕ ಸಬಲೀಕರಣಕ್ಕೆ ಟೊಂಕಕಟ್ಟಿ ನಿಂತಿರುವುದನ್ನು ತಾವು ಅಭಿನಂದಿಸುತ್ತಿರುವುದಾಗಿ ತಿಳಿಸಿದರು. ಯೋಜನಾಧಿಕಾರಿ ಎಂ. ದಿನೇಶ್ ಮಾತನಾಡಿ, ಸಮಾಜದಲ್ಲಿ ಪ್ರಶ್ನೆಗಳು ಎಂದಿಗೂ ಬದಲಾಗುವುದಿಲ್ಲ. ಸರಿಯಾದ ಉತ್ತರ ಹುಡುಕುವ ಜಾಣ್ಮೆ ನಮ್ಮದಾಗಬೇಕೆಂದು ನುಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.