ಶಿವಮೊಗ್ಗ

ಉಚಿತ ತಪಾಸಣೆ

Published On :

ಶಿವಮೊಗ್ಗ: ಅಚ್ಯುತ ರಾವ್ ಲೇಜೌಟ್‌ನಲ್ಲಿರುವ ಮೆಡಿಕೇರ್ ಹೆಸ್ತ್ ಸೆಂಟರ್‌ನ ಆಯುರ್ವೇದ ವಿಭಾಗದಲ್ಲಿ ಜುಲೈ 7ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಗುದ ರೋಗಗಳಿಗೆ ಉಚಿತ ತಪಸಾಣೆ ಹಾಗೂ ಸಲಹಾ ಶಿಬಿರ ಏರ್ಪಡಿಸಲಾಗಿದೆ. ಪೈಲ್ಸ್, ಫಿಸ್ತುಲಾ ಮತ್ತಿತರ ಕಾಯಿಲೆಗೆ ಸಂಬಂಧಿಸಿದಂತೆ ಚಿಕಿತ್ಸೆ ಹಾಗೂ ಸಲಹೆ ನೀಡಲಾಗುವುದು ಎಂದು ಸೆಂಟರ್‌ನ ನಿರ್ದೇಶಕ ಡಾ. ಪ್ರಶಾಂತ್ ಕೇಕುಡ ತಿಳಿಸಿದ್ದಾರೆ. ವಿವರಗಳಿಗಾಗಿ- 08182-659589.
ಬಸವಜ್ಯೋತಿ ಕಾರ್ಯಕ್ರಮ
ಶಿವಮೊಗ್ಗ: ರಾಷ್ಟ್ರೀಯ ಬಸವದಳ ಟ್ರಸ್ಟ್ ಜುಲೈ 6ರಂದು ಬೆಳಿಗ್ಗೆ 11ಕ್ಕೆ ವಿನೋಬನಗರದಲ್ಲಿರುವ ಬಸವ ಮಂಟಪದಲ್ಲಿ ಸಂತ ಗುರುಬಸವಣ್ಣ ಅವರ ತತ್ವಚಿಂಚನೆಯ ಬಸವಜ್ಯೋತಿ ಕಾರ್ಯಕ್ರಮ ಏರ್ಪಡಿಸಿದೆ. ಮುಖ್ಯಅತಿಥಿಯಾಗಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ನಗರಸಭೆ ಸದಸ್ಯ ಮಹಾಂತೇಶ್ ಅವರು ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ನೇತಾಜಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಯೋಗೀಶ್ ತಿಳಿಸಿದ್ದಾರೆ.
ಬಿಡಿ ಸುದ್ದಿ
168 ಅಭ್ಯರ್ಥಿಗಳ ನೋಂದಣಿ
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜೂನ್ ಮಾಹೆಯಲ್ಲಿ ಜಿಲ್ಲೆಯ 116 ಪುರುಷರು ಹಾಗೂ 52 ಮಹಿಳೆಯರು ಸೇರಿದಂತೆ ಒಟ್ಟು 168 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಎಸ್‌ಎಸ್‌ಎಲ್‌ಸಿ ಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರುವ 21, ಎಸ್‌ಎಸ್‌ಎಲ್‌ಸಿ ಹಾಗೂ ಪದವೀಧರರಲ್ಲದ 77, ಪದವೀಧರರು-14 ಹಾಗೂ ತಾಂತ್ರಿಕ ಪದವೀಧರರು-56 ಅಭ್ಯರ್ಥಿಗಳು ಸೇರಿದಂತೆ ಉದ್ಯೋಗಾಕಾಂಕ್ಷಿಗಳು ಹೆಸರನ್ನು ನೋಂದಣಿ ಮಾಡಿಸಿಕೊಂಡಿದ್ದಾರೆ.
ಉಸ್ತುವಾರಿ ಸಮಿತಿ ಸಭೆ
ಶಿವಮೊಗ್ಗ: ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಜುಲೈ 9ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷರು ಹಾಗೂ ಶಿವಮೊಗ್ಗ ಕ್ಷೇತ್ರದ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರರವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ. ಈ ಸಭೆಗೆ ಸಮಿತಿಯ ಸದಸ್ಯರು ಸಕಾಲಕ್ಕೆ ಆಗಮಿಸಿ, ಸುಗಮ ಕಲಾಪದಲ್ಲಿ ಪಾಲ್ಗೊಳ್ಳುವಂತೆ ಹಾಗೂ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.