ಶಿವಮೊಗ್ಗ

ಪ್ರಕೃತಿ ವಿಕೋಪ ಸಹಾಯವಾಣಿ ಕೇಂದ್ರ ಆರಂಭ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ,  ಜು.5
ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡಿದ್ದು, ಮುಂದಿನ ದಿನಗಳಲ್ಲಿ ಭಾರೀ ಮಳೆ ಬೀಳಬಹುದಾದ ಸಂಭವವಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ತುರ್ತಾಗಿ ಕಾರ್ಯನಿರ್ವಹಿಸಲು ಜಿಲ್ಲೆಯ 2 ಉಪವಿಭಾಗಾಧಿಕಾರಿಗಳ ಕಚೇರಿ ಸೇರಿದಂತೆ  ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಸಹಾಯವಾಣಿ ಕೇಂದ್ರವನ್ನು ಆರಂಭಿಸಿಲಾಗಿದೆ.
ಈ ಸಹಾಯವಾಣಿ ಕೇಂದ್ರವು ಸರ್ಕಾರಿ ರಜಾದಿನವನ್ನು ಒಳಗೊಂಡು ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಗಿನ 8 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಸಾರ್ವಜನಿಕರು ಪ್ರಕೃತಿ ವಿಕೋಪ, ನೆರೆ ಹಾವಳಿ ಇತ್ಯಾದಿಗಳಿಂದ ಉಂಟಾಗುವ ಸಮಸ್ಯೆಗಳ ಪರಿಹಾರಕ್ಕಾಗಿ ಸಹಾಯವಾಣಿ ಕೇಂದ್ರಕ್ಕೆ ದೂರವಾಣಿ ಕರೆ ಮಾಡಿ ದೂರು ದಾಖಲಿಸಿ ಪರಿಹಾರಕಾರ್ಯಕ್ಕೆ ನೆರವಾಗಬಹುದು.
ದೂರವಾಣಿ: ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ದೂರವಾಣಿ 08182-271101, 1077, ಉಪವಿಭಾಗಾಧಿಕಾರಿಗಳ ಕಚೇರಿ -222204, ಉಪವಿಭಾಗಾಧಿಕಾರಿಗಳ ಕಚೇರಿ ಸಾಗರ-08183-226601, ತಹಶೀಲ್ದಾರ್ ಶಿವಮೊಗ್ಗ-08182-279312, ಭದ್ರಾವತಿ ತಹಶೀಲ್ದಾರ್-08282-267283, ತೀರ್ಥಹಳ್ಳಿ ತಹಶೀಲ್ದಾರ್-08184-272241, ಸಾಗರ ತಹಶೀಲ್ದಾರ್-08187-222239, ಸೊರಬ ತಹಶೀಲ್ದಾರ್-08184-272241, ಶಿಕಾರಿಪುರ ತಹಶೀಲ್ದಾರ್-08187-222239 ಹಾಗೂ ಹೊಸನಗರ ತಹಶೀಲ್ದಾರ್-08185-221239ನ್ನು ಸಂಪರ್ಕಿಸಬಹುದು.
ಪ್ರಕೃತಿ ವಿಕೋಪ ನಿರ್ವಹಣೆ ಯೋಜನೆಯಡಿ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರ ಶಾಖೆಯ ಕಾರ್ಯಾಲಯದಲ್ಲಿ ಪ್ರತ್ಯೇಕ ದೂರವಾಣಿ ಸಂಪರ್ಕವನ್ನು ಅಳವಡಿಸಲಾಗಿದೆ. ದೂರವಾಣಿ ಸಂಪರ್ಕ ಸಂಖ್ಯೆ 1077 ಮತ್ತು 08182-271101ಆಗಿದ್ದು, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಈ ಕೇಂದ್ರದಲ್ಲಿ ದೂರವಾಣಿ ಕರೆಗಳ ಸೂಕ್ತ ನಿರ್ವಹಣೆಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.