ಶಿವಮೊಗ್ಗ

'ಸಮಸ್ಯೆ ಪರಿಹಾರಕ್ಕೆ ಸಹಕಾರ ಅಗತ್ಯ'

Published On :

ಕಪ್ರ.ವಾರ್ತೆ  ಶಿವಮೊಗ್ಗ  ಜು.5
ಸಾರ್ವಜನಿಕ ವಲಯದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಸಮಸ್ಯೆ ಇದ್ದೇ ಇರುತ್ತದೆ. ಸಮಸ್ಯೆಗಳಿಗೆ ಸರ್ಕಾರ ಎಷ್ಟೇ ಸ್ಪಂದಿಸಿದರೂ ಸಮಸ್ಯೆಗಳ ಪರಿಹಾರಕ್ಕೆ ಸಾರ್ವಜನಿಕರ ಸಹಕಾರ ಅತೀ ಮುಖ್ಯ ಎಂದು ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ರಾಜೇಂದ್ರನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಮೈತ್ರಿ ಮಹಿಳಾ ಸಂಘ, ರಾಜೇಂದ್ರನಗರ ಯುವಕ ಸಂಘವು  ರೋಟರಿ ಪೂರ್ವ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಕುಂದುಕೊರತೆ ಸಭೆ ಮತ್ತು ಸನ್ಮಾನ ಸಮಾರಂಭದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ನಿವಾಸಿಗಳ ಗೌರವ ಅಧ್ಯಕ್ಷ ಡಾ. ಕೆ.ಆರ್.ಶ್ರೀಧರ್, ಬಡಾವಣೆಯ ಅತ್ಯಂತ ಮೂಲಭೂತ ಸಮಸ್ಯೆಗಳ ಬಗ್ಗೆ ವಿವರಿಸಿ ಮನವಿ ಸಲ್ಲಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಬಡಾವಣೆಯ ಸಮಸ್ಯೆಗಳನ್ನು ಪರಿಹರಿಸುವುದರ ಜೊತೆಗೆ ಜೈಲು ಸ್ಥಳಾಂತರಗೊಂಡ ನಂತರ ಫ್ರೀಡಂ ಪಾರ್ಕ್ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.
20 ಲಕ್ಷ ಅನುದಾನ: ರೋಟರಿ ಶಾಲೆ ಎದುರುಗಡೆ ಇರುವ ಸ್ಥಳದಲ್ಲಿ ಕಾನೂನು ತೊಡಕು ಪರಿಹರಿಸಿ ಆ ಜಾಗದಲ್ಲಿ ಸುಸಜ್ಜಿತ ಪಾರ್ಕ್ ನಿರ್ಮಾಣಕ್ಕೆ 20 ಲಕ್ಷ ಅನುದಾನ ನೀಡುವುದಾಗಿ ಘೊಷಿಸಿದರು. ಇದೇ ಸಂದರ್ಭದಲ್ಲಿ ನಗರಸಭೆ ಸದಸ್ಯ ನಾಗರಾಜಜ್ಕಂಕಾರಿ ಮಾತನಾಡಿ, ಬಡಾವಣೆಯ ಕುಂದುಕೊರತೆಗಳನ್ನು ಪ್ರಾಮಾಣಿಕವಾಗಿ ಪರಿಹರಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೊ. ಪದ್ಮನಾಭ, ಲಕ್ಷ್ಮೀ ಟಾಕೀಸ್ ಹತ್ತಿರುವ ಇರುವ ಚಾನೆಲ್‌ಗೆ ತಂತಿಬೇಲಿ ನಿರ್ಮಿಸಿಕೊಡಬೇಕು ಹಾಗೂ ಸರಗಳ್ಳತನಕ್ಕೆ ಪರಿಹಾರ ಒದಗಿಸಿಕೊಡಬೇಕೆಂದು ಕೋರಿದರು.
ರೋಟರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಜಿ. ವಿಜಯಕುಮಾರ್, ರೋಟರಿ ಅಧ್ಯಕ್ಷ ಕೆ.ಬಿ. ರವಿಶಂಕರ್, ಮೈತ್ರಿ ಮಹಿಳಾ ಸಂಘದ ಅಧ್ಯಕ್ಷೆ ಜಯಲಕ್ಷ್ಮಿ, ಕಾರ್ಯದರ್ಶಿ ಗುರುಶೇಟ್ ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.