ಉಚಿತ ನೋಟ್‌ಬುಕ್ ವಿತರಣೆ
ಕ.ಪ್ರ.ವಾರ್ತೆ ಸಾಗರ ಜು.6
ಶಿಕ್ಷಣದ ಜೊತೆಗೆ ಸರ್ಕಾರೇತರ ಸಂಘ ಸಂಸ್ಥೆಗಳು ನೀಡುತ್ತಿರುವ ಕೊಡುಗೆ ಅನನ್ಯವಾದುದು ಎಂದು ಪ್ರಾಂತ್ಯ ಆರ್ಯ ಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಸಿ. ಪರಶುರಾಮಪ್ಪ ಹೇಳಿದರು.
ಪಟ್ಟಣದ ಸೇವಾಸಾಗರ ಶಾಲೆಯ ಅಜಿತ ಸಭಾಭವನದಲ್ಲಿ ವಿಪ್ರ ನೌಕರರ ಕ್ಷೇಮಾಭಿವೃದ್ಧಿ ಸಂಘ ಶನಿವಾರ ಹಮ್ಮಿಕೊಂಡಿದ್ದ ತಾಲೂಕಿನ ಆಯ್ದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಲವು ರೀತಿ ಸ್ಪಂದನೆ: ಸಮಾಜದಲ್ಲಿ ಆರ್ಥಿಕ ಹಿನ್ನಡೆ ಶಿಕ್ಷಣಕ್ಕೆ ಅಡ್ಡಿಯಾಗಬಾರದು. ಈ ದಿಸೆಯಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಜೊತೆಗೆ ಸರ್ಕಾರೇತರ ಸಂಘ ಸಂಸ್ಥೆಗಳು ಹಲವು ರೀತಿಯಲ್ಲಿ ರೀತಿಯಲ್ಲಿ ಸ್ಪಂದಿಸುತ್ತಿವೆ. ವಿದ್ಯಾರ್ಥಿಗಳು ಇಂತಹ ಸಹಾಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಜೋಷಿ ಫೌಂಡೇಶನ್ ಮುಖ್ಯಸ್ಥ ದಿನೇಶಕುಮಾರ್ ಜೋಷಿ ಮಾತನಾಡಿ, ಸರ್ಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಪೋಷಕರು ಶಾಲೆಯೊಂದಿಗೆ ಉತ್ತಮ ಸಂಬಂಧ ಇರಿಸಿಕೊಳ್ಳಬೇಕು. ಮಕ್ಕಳನ್ನು ಶಾಲೆಗೆ ಕಳಿಸಿದ ತಕ್ಷಣ ನಮ್ಮ ಜವಾಬ್ದಾರಿ ಮುಗಿಯಿತು ಎನ್ನುವ ಮನೋಭಾವ ಮೊದಲು ನಮ್ಮಿಂದ ದೂರವಾಗಬೇಕು. ಸರ್ಕಾರದೊಂದಿಗೆ ದಾನಿಗಳು, ಸಂಘಸಂಸ್ಥೆಗಳು ನಮ್ಮ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುತ್ತಿದ್ದು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ನೀಡಿದರೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇಂದಿಗೂ ಬೇರೆಬೇರೆ ಕಾರಣಗಳಿಂದ ಉತ್ತಮ ಶಿಕ್ಷಣ ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.
ಎಲ್ಲರ ಜವಾಬ್ದಾರಿ: ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಬಿ.ಎನ್. ರಾಮಚಂದ್ರ, ಶಿಕ್ಷಣ ಕ್ಷೇತ್ರದ ಉನ್ನತೀಕರಣಕ್ಕೆ ಎಲ್ಲರ ಸಹಕಾರ ಅಗತ್ಯ. ಸಂತೋಷದ ಮನಸ್ಸು ಕಲಿಕೆಗೆ ಪೂರಕವಾಗಿರುತ್ತದೆ. ಮಕ್ಕಳು ಸದಾ ಆರೋಗ್ಯಪೂರ್ಣ ಹಾಗೂ ಸಂತೋಷವಾಗಿರುವಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಎಲ್ಲರ ಮೇಲೆ ಇದೆ ಎಂದರು.
150ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕವನ್ನು ವಿತರಣೆ ಮಾಡಲಾಯಿತು. ಸಂಘದ ಅಧ್ಯಕ್ಷ ಶ್ರೀಧರ ಭಟ್ ಅಧ್ಯಕ್ಷತೆ ವಹಿಸಿದ್ದರು. ವೈ. ಮೋಹನ್ ಸ್ವಾಗತಿಸಿದರು. ಮ.ಸ.ನಂಜುಂಡಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೃಷ್ಣಮೂರ್ತಿ ವಂದಿಸಿದರು. ಡಾ. ವೆಂಕಟೇಶ್ ಜೋಯಿಸ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

