ಬಿಜೆಪಿ ಕ್ಷೇತ್ರವಾರು ಪದಾಧಿಕಾರಿಗಳ ಆಯ್ಕೆ
ಕ.ಪ್ರ.ವಾರ್ತೆ, ಶಿವಮೊಗ್ಗ, ಜು.7
ಮುಂದಿನ ಲೋಕಸಭೆ ಚುನಾವಣೆಯನ್ನು ಎದರಿಸಲು ಸಿದ್ಧವಾಗಿರುವ ಜಿಲ್ಲಾ ಬಿಜೆಪಿ ಇದೀಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವನ್ನು ಎರಡು ಭಾಗವನ್ನಾಗಿ ವಿಭಜಿಸಿ ಚುನಾವಣೆಗೆ ಸಜ್ಜಾಗುತ್ತಿದ್ದು, ಕ್ಷೇತ್ರವಾರು ನೂತನ ಪದಾಧಿಕಾರಿಗಳ ಆಯ್ಕೆಯನ್ನು ಭಾನುವಾರ ಪಕ್ಷದ ಮುಖಂಡರ ಸಮ್ಮುಖದಲ್ಲಿ ನಡೆಸಿದೆ.
ಶಿವಮೊಗ್ಗ ಗ್ರಾಮಾಂತರ ಮತ್ತು ಹೊಳೆಹೊನ್ನೂರು ಮಂಡಳಿ ಎಂದು ವಿಭಜಿಸಿ, ಗ್ರಾಮಾಂತರಕ್ಕೆ ನಿದಿಗೆ ರುದ್ರೇಗೌಡ ಮತ್ತು ಹೊಳೆಹೊನ್ನೂರು ಮಂಡಳಿಗೆ ಡಿ. ಮಂಜುನಾಥ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಆಯ್ಕೆ ಪ್ರಕ್ರಿಯೆ ನಂತರ ಮಾತನಾಡಿದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಗ್ರಾಮಾಂತರ ಕ್ಷೇತ್ರ ಬಹಳ ದೊಡ್ಡ ಕ್ಷೇತ್ರ ಇದನ್ನು ಒಬ್ಬ ವ್ಯಕ್ತಿ ಸಂಘಟಿಸಲು ಸಾಧ್ಯವಿಲ್ಲ. ಹಿಗಾಗೀ ಎರಡು ಕ್ಷೇತ್ರಗಳಾಗಿ ವಿಂಗಡಿಸಲಾಗಿದೆ. ಇನ್ನು ಮುಂದೆ ಕಾರ್ಯಕರ್ತರು ಯಾವುದಕ್ಕೂ ಚಿಂತೆ ಪಡುವ ಅಗತ್ಯವಿಲ್ಲ. ಈ ಹಿನ್ನೆಲೆಯಲ್ಲಿ ಕಳೆದ ಚುನಾವಣೆಯಲ್ಲಿ ಕಂಡ ಸೋಲನ್ನು ಸವಾಲು ಎಂದು ಸ್ವೀಕರಿಸಿ, ಪಕ್ಷದ ನಾಯಕರು ಬೂತ್ ಮಟ್ಟದಲ್ಲಿರುವ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಬೇಕು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಬೇಕು ಎಂದರು.
ಮಾದರಿ ದೇಶ: ಮುಂಬರುವ ಸವಾಲಿನ ದಿನಗಳನ್ನು ಎದುರಿಸಿ, ಕಾರ್ಯಕರ್ತರು ಎನ್‌ಡಿಎಯನ್ನು ಅಧಿಕಾರಕ್ಕೆ ತರಬೇಕು. ದೇಶದಲ್ಲಿ ಪ್ರಸ್ತುತ ಇರುವ ವ್ಯವಸ್ಥೆಯನ್ನು ಬದಲು ಮಾಡಬೇಕು ಎಂದ ಅವರು, ಎನ್‌ಡಿಎ ಅಧಿಕಾರಕ್ಕೆ ಬಂದರೆ ದೇಶದ ನದಿಗಳನ್ನು ಜೋಡಿಸುವಂತ ಯೋಜನೆಗಳನ್ನು ಕೈಗೆತ್ತಿಕೊಂಡು ದೇಶವನ್ನು ಮಾದರಿ ದೇಶವನ್ನಾಗಿ ಮಾಡುವ ಚಿಂತನೆ ಪಕ್ಷಕ್ಕಿದೆ ಎಂದು ತಿಳಿಸಿದರು.
ಕಾಡಾ ಮಾಜಿ ಅಧ್ಯಕ್ಷ ಗಿರೀಶ್ ಪಟೇಲ್ ಹಾಗೂ ಹೊಳೆಹೊನ್ನೂರು ಮಂಡಳಿ ಕ್ಷೇತ್ರದ ನೂತನ ಅಧ್ಯಕ್ಷ ಡಿ. ಮಂಜುನಾಥ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಆರ್.ಕೆ. ಸಿದ್ದರಾಮಣ್ಣ, ವಿಧಾನಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ರಾಜ್ಯ ಸಭಾ ಸದಸ್ಯ ಆಯನೂರು ಮಂಜನಾಥ್, ಸೂಡಾ ಮಾಜಿ ಅಧ್ಯಕ್ಷ ದತ್ತಾತ್ರಿ, ನಗರಾಧ್ಯಕ್ಷ ನಟರಾಜ್, ಮುಖಂಡರಾದ ಎಚ್.ಸಿ. ಬಸವರಾಜಪ್ಪ, ಶರಾವತಿ ಸಿ. ರಾವ್ ಮತ್ತಿತತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

