ಶಿವಮೊಗ್ಗ

ತಿದ್ದುಪಡಿ ಮಸೂದೆಗೆ ಸ್ವಾಗತ

Published On :

ಶಿವಮೊಗ್ಗ: ವರ್ಷಕ್ಕೆ ಎರಡು ಬಾರಿ ಗ್ರಾಮಸಭೆ ಮತ್ತು ವಾರ್ಡ್‌ಸಭೆಗಳನ್ನು ನಡೆಸಲು ವಿಫಲರಾಗುವ ಗ್ರಾ.ಪಂ ಅಧ್ಯಕ್ಷ ಮತ್ತು ವಾರ್ಡ್ ಸದಸ್ಯರನ್ನು ಅನರ್ಹಗೊಳಿಸಲು ಅವಕಾಶ ಕಲ್ಪಿಸುವ ಕರ್ನಾಟಕ ಪಂಚಾಯತ್ ರಾಜ್ ತಿದ್ದುಪಡಿ ಮಸೂದೆಯನ್ನು ಹೊಳಲೂರು ಮಾಜಿ ಪ್ರಧಾನರು ಹಾಗೂ ಗ್ರಾ.ಪಂ ಸದಸ್ಯ ಕೆ.ಜಿ. ನಿಂಗಪ್ಪ ಸ್ವಾಗತಿಸಿದ್ದಾರೆ.
 ಅಧ್ಯಕ್ಷರು ಮತ್ತು ಸದಸ್ಯರನ್ನು ಅನರ್ಹಗೊಳಿಸಲು ಅವಕಾಶ ಕಲ್ಪಿಸುವ ಜೊತೆಗೆ ಗ್ರಾ.ಪಂ. ಪಿಡಿಓ, ಕಾರ್ಯದರ್ಶಿ ಅವರ ಅಧಿಕಾರವನ್ನು ಸಹ ವಜಾಗೊಳಿಸುವಂತೆ ಮಸೂದೆಗೆ ತಿದ್ದುಪಡಿ ತರುಬೇಕು. ಪ್ರಸಕ್ತ ನಮ್ಮ ರಾಜಕೀಯ ಮುಖಂಡರು ಅಧಿಕಾರ ದುರ್ಬಳಕೆ ಮಾಡಿಕೊಂಡು ಕೆಲವು ಅಧಿಕಾರಿಗಳೊಂದಿಗೆ ಸಮುದಾಯದ ಬದುಕನ್ನು ನರಕಗೊಳಿಸಿದ್ದು, ಪ್ರಜಾಪ್ರಭುತ್ವ ಮತ್ತು ರಾಜಕೀಯ ವ್ಯವಸ್ಥೆಯನ್ನು ಭ್ರಷ್ಟ ರಾಜಕಾರಣಿಗಳು, ಅಧಿಕಾರಿಗಳು ಇಂದು ಹಾಳು ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.  ಈ ಸಂಬಂಧವಾಗಿ ಪಂಚಾಯತ್ ಮಂತ್ರಿಗಳು ಕಾನೂನು ಜಾರಿಗೊಳಿಸುವಂತೆ ಕೆ.ಜಿ. ನಿಂಗಪ್ಪ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.