'ಭಾವನೆಗೆ ಧಕ್ಕೆ ತರುವ ಚಲನಚಿತ್ರ ಪ್ರದರ್ಶನ ಬೇಡ'
ಕ.ಪ್ರ.ವಾರ್ತೆ, ಶಿವಮೊಗ್ಗ, ಜು.8
ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತರುವ ಭಾಗ್ ಮಿಲ್ಕಾ ಭಾಗ್ ಹಿಂದಿ ಚಲನಚಿತ್ರ ಪ್ರದರ್ಶನ ನಿಷೇಧಕ್ಕೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹಾಡನ್ನು ಒಳಗೊಂಡಿರುವ ಹಿಂದಿ ಚಲನಚಿತ್ರ ಭಾಗ್ ಮಿಲ್ಕಾ ಭಾಗ್ ಚಿತ್ರವನ್ನು ತಕ್ಷಣವೇ ರದ್ದುಪಡಿಸಬೇಕು ಎಂದು ಆಗ್ರಹಿಸಿದ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಮೂಲಕ ಕೇಂದ್ರ ಸೆನ್ಸಾರ್ ಬೋರ್ಡ್ಗೆ ಇದೇ ಸಂದರ್ಭದಲ್ಲಿ ಮನವಿ ಅರ್ಪಿಸಿದರು.
ಈ ಸಿನಿಮಾದ ವಿವಾದಾಸ್ಪದ ಹಾಡು, ಆ ಹಾಡಿಗೆ ಮಾಡಲಾಗಿರುವ ಅಭಿನಯವು ಹಿಂದೂ ಧರ್ಮಿಯರ ಧಾರ್ಮಿಕ ವಿಧಿ- ವಿಧಾನಗಳನ್ನು ಅವಹೇಳನ ಮಾಡುವಂತಿದೆ. ಹೋಮ-ಹವನ ವಿಧಿಯನ್ನು ಭಯಾನಕ ಕೃತ್ಯದೊಂದಿಗೆ ಸೇರಿಸಲಾಗಿದೆ ಎಂದು ಸಮಿತಿ ಕಾರ್ಯಕರ್ತರು ಆಪಾದಿಸಿದರು.
ಧಾರ್ಮಿಕ ಆಚರಣೆ: ಹೋಮ- ಹವನ ಹಿಂದೂ ಧರ್ಮದ ಪ್ರಮುಖ ಧಾರ್ಮಿಕ ಆಚರಣೆಗಳಲ್ಲೊಂದು. ಈ ಪ್ರಕ್ರಿಯೆಗೆ ಸಾವಿರಾರು ಶತಮಾನಗಳ ಇತಿಹಾಸವಿದೆ. ಆದರೆ ಭಾಗ್ ಮಿಲ್ಕಾ. .ಚಿತ್ರದ ಹಾಡಿನಲ್ಲಿ ಈ ಧಾರ್ಮಿಕ ವಿಧಿ- ವಿಧಾನವನ್ನು ಆಕ್ಷೇಪಾರ್ಹವಾಗಿ ಚಿತ್ರಿಸಲಾಗಿರುವುದು ವಿಶ್ವದಲ್ಲಿರುವ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳ ಮೇಲೆ ಮಾಡಿದ ಆಕ್ರಮಣವಾಗಿದೆ ಎಂದು ಸಮಿತಿ ದೂರಿದೆ.
ಸಾಮಾಜಿಕ ವಾತಾವರಣದ ಮೇಲೆ ಈ ರೀತಿಯ ಚಲನಚಿತ್ರಗಳು ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಸೆನ್ಸಾರ್ ಬೋರ್ಡ್ನವರು ಈ ಚಿತ್ರದ ಪ್ರದರ್ಶನದ ಮೇಲೆ ನಿಷೇಧ ಹೇರಬೇಕು ಎಂದು ಸಮಿತಿ ಒತ್ತಾಯಿಸಿತು.
ಚಿತ್ರದ ನಿರ್ದೇಶಕರು ದೇಶದ ಕ್ಷಮೆ ಯಾಚಿಸಬೇಕು. ಚಲನಚಿತ್ರ ಮಂದಿರಗಳ ಮಾಲೀಕರು ಈ ಚಿತ್ರ ಪ್ರದರ್ಶನಕ್ಕೆ ಮುಂದಾಗಬಾರದು. ಒಂದು ವೇಳೆ ಚಲನಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದರೆ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿ ಎಚ್ಚರಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

