ಶಿವಮೊಗ್ಗ

ಕುಂಸಿಯಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಮನವಿ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ,  ಜು.8
ತಾಳಗುಪ್ಪ-ಶಿವಮೊಗ್ಗ- ಬೆಂಗಳೂರು ಎಕ್ಸ್‌ಪ್ರೆಸ್ ರೈಲನ್ನು ಕುಂಸಿ ಗ್ರಾಮದಲ್ಲಿ ನಿಲ್ಲಿಸಲು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕುಂಸಿ ಗ್ರಾಮಸ್ಥರು ನೈರುತ್ಯ ರೈಲ್ವೆವಲಯದ ಡಿವಿಜನಲ್ ಮ್ಯಾನೇಜರ್ ಅವರನ್ನು ಒತ್ತಾಯಿಸಿದ್ದಾರೆ.
ಕುಂಸಿ ಗ್ರಾಮವು ಬೆಂಗಳೂರು- ಹೊನ್ನಾವರ ರಾಷ್ಟ್ರೀಯ ಹೆದ್ದಾರಿ- 206 ಮಾರ್ಗ ಮಧ್ಯೆ ಹಾದು ಹೋಗಿದ್ದು, ಈ ಹಿಂದೆ ಗ್ರಾಮದಲ್ಲಿ ರೈಲ್ವೆ ಮೀಟರ್‌ಗೇಜ್ ಮಾರ್ಗ ಹಾಗೂ ರೈಲು ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ, ಶಿವಮೊಗ್ಗ- ತಾಳಗುಪ್ಪ ರೈಲ್ವೆ ಮಾರ್ಗವು ಬ್ರಾಡ್‌ಗೇಜ್‌ಗೆ ಪರಿವರ್ತನೆಯಾದ ನಂತರ ತಾಳಗುಪ್ಪ- ಶಿವಮೊಗ್ಗ- ಬೆಂಗಳೂರು ಎಕ್ಸ್‌ಪ್ರೆಸ್ ರೈಲನ್ನು ಕುಂಸಿ ಗ್ರಾಮದಲ್ಲಿ ನಿಲ್ಲಿಸುತ್ತಿಲ್ಲ ಎಂದು ಗ್ರಾಮಸ್ಥರು ಮನವಿಯಲ್ಲಿ ದೂರಿದ್ದಾರೆ.
ಖರ್ಗೆಯರಿಗೆ ಮನವಿ: ಕುಂಸಿ ರೈಲ್ವೆ ನಿಲ್ದಾಣವು ಶಿವಮೊಗ್ಗ ತಾಲೂಕು ಮತ್ತು ಶಿಕಾರಿಪುರ ತಾಲೂಕಿನ ಬಹುತೇಕ ಗ್ರಾಮಗಳಿಗೆ ಪ್ರಮಖ ರೈಲ್ವೆ ನಿಲ್ದಾಣವಾಗಿದ್ದು, ಇದೀಗ ರೈಲು ನಿಲುಗಡೆ ನಿಷೇಧ ಮಾಡಿರುವುದರಿಂದ ಇಲ್ಲಿನ ಗ್ರಾಮಗಳಿಂದ ಬೆಂಗಳೂರು ಇತರೆಡೆ ತೆರಳುವ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಈ ಸಂಬಂಧವಾಗಿ ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತು ಹಿರಿಯ ರೈಲ್ವೆ ಅಧಿಕಾರಿಗಳಿಗೆ ಮನವಿ ಕೂಡ ಮಾಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ತಾಳಗುಪ್ಪ, ಬೆಂಗಳೂರು ಮಾರ್ಗದ ಕುಂಸಿ ರೈಲ್ವೆ ನಿಲ್ದಾಣ ಬ್ಲಾಕ್ ಸ್ಟೇಷನ್ ಆಗಿದ್ದು, ಸ್ಟೇಷನ್ ಮಾಸ್ಟರ್ ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರಿಂದ ರೈಲ್ವೆ ಅಧಿಕಾರಿಗಳು ಇತ್ತ ಗಮನ ಹರಿಸಿ ತಾಳಗುಪ್ಪ- ಶಿವಮೊಗ್ಗ- ಬೆಂಗಳೂರು ಎಕ್ಸ್‌ಪ್ರೆಸ್ ರೈಲನ್ನು ಕುಂಸಿ ನಿಲ್ದಾಣದಲ್ಲಿ ನಿಲುಗಡೆ ಮಾಡಬೇಕು. ಮೈಸೂರು- ತಾಳಗುಪ್ಪ, ತಾಳಗುಪ್ಪ- ಶಿವಮೊಗ್ಗ ಪ್ಯಾಸೆಂಜರ್ ರೈಲನ್ನು ಶೀಘ್ರವಾಗಿ ಬಿಡುವಂತೆ ವಿವಿಧ ಸಂಘ, ಸಂಸ್ಥೆಗಳು, ಕುಂಸಿ ಮತ್ತು ಸುತ್ತಮುತ್ತ, ಗ್ರಾಮಸ್ಥರು ಒತ್ತಾಯಿಸಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.