ಡೆಂಘೀ ಕುರಿತು ಜಾಗೃತಿ ಕಾರ್ಯಕ್ರಮ
ಸೊರಬ: ತಾಲೂಕಿನ ಮಂಚಿ ಗ್ರಾಮದಲ್ಲಿ ಡೆಂಘೀ ಹಾಗೂ ಚಿಕೂನ್ ಗುನ್ಯಾ ರೋಗ ಕುರಿತು ಜಾಗೃತಿ ಮೂಡಿಸಲು ಸರ್ಕಾರಿ ಆಯುರ್ವೇದ ಚಿಕಿತ್ಸಾಲ ವತಿಯಿಂದ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ವೈದ್ಯಾಧಿಕಾರಿ ಡಾ. ಎಂ.ಕೆ. ಮಹೇಶ್, ಇಂತಹ ಸಾಂಕ್ರಾಮಿಕ ರೋಗ ಪ್ರಸರಣಕ್ಕೆ ಸೊಳ್ಳೆಗಳು ಪ್ರಮುಖ ಕಾರಣ. ಮೊದಲು ಸೊಳ್ಳೆಗಳ ನಿರ್ಮೂಲನೆ ಆಗಬೇಕು. ಇದಕ್ಕೆ ಪೂರಕವಾಗಿ ನಾವು ವಾಸಿಸುವ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ರೋಗ ಎದುರಿಸಲು ಸತ್ವಭರಿತ ಆಹಾರದ ಸೇವನೆ ಅಗತ್ಯ, ನಿಯಂತ್ರಣ ಕೇವಲ ಇಲಾಖೆಗಳ ಹೊಣೆ ಮಾತ್ರವಲ್ಲ, ಸಾರ್ವಜನಿಕರ ಸಹಕಾರ ತೀರ ಅವಶ್ಯ ಎಂದು ತಿಳಿಸಿದರು.
ಹಿರಿಯ ಆರೋಗ್ಯ ಸಹಾಯಕ ಡಾ. ರಮಾಕಾಂತ್ ಮಾತನಾಡಿ, ಮನೆಯ ಬಳಿ ಶೇಖರಣೆಗೊಂಡ ಗಲೀಜು ನೀರನ್ನು ಗಮನಿಸಿ ಸ್ವಚ್ಛಗೊಳಿಸಬೇಕು. ಸೋಸಿ ಕಾಯಿಸಿದ ನೀರನ್ನು ಕುಡಿಯಬೇಕು. ಯಾವುದೇ ಕಾರಣಕ್ಕೂ ಜ್ವರ ಬಂದರೆ ಉದಾಸೀನ ಮಾಡದೆ ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯಬೇಕು ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅರುಂಧತಿ, ಹಿರಿಯ ಆರೋಗ್ಯ ಸಹಾಯಕಿಯರಾದ ಐರಿನ್ ಕೋತ, ರಾಧಮ್ಮ, ಸತ್ಯವತಿ, ಗ್ರಾಪಂ ಕಾರ್ಯದರ್ಶಿ ಸುರೇಶ್, ರೇಣುಕಾಪ್ರಸಾದ್, ಕಿರಿಯ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಇದ್ದರು.
ಪದಾಧಿಕಾರಿಗಳ ಆಯ್ಕೆ
ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣಗುರು ವರ್ತಕರ ಮತ್ತು ವೃತ್ತಿ ನಿರತರ ಸಂಘದ ಪದಾಧಿಕಾರಿಗಳ ಆಯ್ಕೆ ನಡೆದಿದಢ್ದು, ಅಧ್ಯಕ್ಷರಾಗಿ ಶ್ರೀನಿವಾಸ ನಾಯ್ಕ, ಗೌರವಾಧ್ಯಕ್ಷರಾಗಿ ಎಚ್.ಕೆ. ಪುರುಷೋತ್ತಮ ನೇಮಕಗೊಂಡಿದ್ದಾರೆ. ನಿಯೋಜಿತ ಅಧ್ಯಕ್ಷರಾಗಿ ಮಂಜುನಾಥ್, ಉಪಾಧ್ಯಕ್ಷರಾಗಿ ಪ್ರದೀಪ್ ಕುಮಾರ್ ಮತ್ತು ಎಸ್.ಎಂ. ಹರೀಶ್, ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್, ಸಹಕಾರ್ಯದರ್ಶಿಯಾಗಿ ನಾಗರಾಜ್, ಮಾಲತೇಶ್, ಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

