ಶಿವಮೊಗ್ಗ

ಪಿಕಪ್ ಬಸ್ ನಿಲ್ದಾಣ: ಕ್ರಮಕ್ಕೆ ಸೂಚನೆ

Published On :

ಸಾಗರ: ಸರ್ಕಾರಿ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣದ ಮಧ್ಯೆ ಪಿಕಪ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ನಗರಸಭೆಗೆ ಮಂಗಳವಾರ ಭೇಟಿ ನೀಡಿದ ಸಂದರ್ಭದಲ್ಲಿ, ಪಿಕಪ್ ಬಸ್ ನಿಲ್ದಾಣಕ್ಕೆ ಸರ್ಕಾರಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಸುಮಾರು 1.19 ಎಕರೆ ಜಾಗ ಖಾಲಿಯಿದೆ. ಇದನ್ನು ಬಿಟ್ಟುಕೊಡುವಂತೆ ಸಾರಿಗೆ ನಿಗಮದೊಂದಿಗೆ ಪತ್ರ ವ್ಯವಹಾರ ನಡೆಸಲು ಸೂಚಿಸಿದರಲ್ಲದೆ ನಗರಸಭೆ ಅಸ್ಥಿತ್ವಕ್ಕೆ ಬಂದ ತಕ್ಷಣ ಈ ಸಂಬಂಧ ನಿರ್ಣಯ ಕೈಗೊಂಡು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರಿಗೆ ಕಳಿಸಿಕೊಡುವಂತೆ ಹೇಳಿದರು.
ನೋಟಿಸ್ ನೀಡಿ: ಪಟ್ಟಣದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಉದ್ದೇಶಿತ ಕಾರ್ಯಕ್ಕೆ ಮಳಿಗೆ ನೀಡಲಾಗಿದ್ದರೂ ಸಾಕಷ್ಟು ಮಳಿಗೆಗಳಲ್ಲಿ ಈ ವರೆಗೆ ಕೈಗಾರಿಕೆಗಳು ಆರಂಭಗೊಂಡಿಲ್ಲ. ಕೈಗಾರಿಕೆ ತೆರೆಯದ ಮಳಿಗೆ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಲು ಆದೇಶ ನೀಡಿದರು. ಮಂಗಳಬೀಸು ಗ್ರಾಮದಲ್ಲಿ ಕೈಗಾರಿಕಾ ವಸಾಹತು ನಿರ್ಮಾಣಕ್ಕಾಗಿ ಒಂಬತ್ತು ಎಕರೆ ಜಾಗವನ್ನು ವಶಪಡಿಸಿಕೊಳ್ಳುವ ಉದ್ದೇಶ ಹೊಂದಲಾಗಿದೆ. ಆ ಜಾಗದಲ್ಲಿ ಇನ್ನು 50 ಮಳಿಗೆಗಳನ್ನು ಕಟ್ಟುವ ಬಗ್ಗೆ ಅರ್ಜಿ ಆಹ್ವಾನಿಸುವಂತೆ ಕೈಗಾರಿಕಾ ವಿಸ್ತರಣಾಧಿಕಾರಿಗೆ ಸೂಚನೆ ನೀಡಿದರು.
ನಗರಸಭೆ ಪರಿಸರ ಅಭಿಯಂತರ ಪ್ರಭಾಕರ, ಕಿರಿಯ ಅಭಿಯಂತರ ಎಚ್.ಕೆ. ನಾಗಪ್ಪ, ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.